ನವದೆಹಲಿ: ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಥವಾ ಪಿಂಚಣಿ ಸಂಗ್ರಹಿಸಲು ಅಗತ್ಯವಿರುವ ಜೀವನ ಪ್ರಮಾಣಪತ್ರ ಪಡೆಯಲು ಇನ್ನು ಮುಂದೆ ಆಧಾರ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಸರ್ಕಾರದ ನಿರ್ಧಾರದಿಂದ ಹಿರಿಯ ಪಿಂಚಣಿದಾರರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಜೀವನ ಪ್ರಮಾಣ ಪತ್ರ ಪಡೆಯಲು ಆಧಾರ್ ಕಡ್ಡಾಯವಲ್ಲ. ಆದರೆ ಸ್ವಯಂಪ್ರೇರಿತವಾಗಿ ಆಧಾರ ಸಲ್ಲಿಸಿ ಜೀವನ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದು ಎಂದು ಸರ್ಕಾರ ತಿಳಿಸಿದೆ.
ಕಾಲಕಾಲಕ್ಕೆ ಯುಐಡಿಎಐ ಹೊರಡಿಸಿದ ಸುತ್ತೋಲೆಗಳು ಮತ್ತು ಮಾರ್ಗಸೂಚಿಗಳು ಪ್ರಕಾರ ಜೀವನ ಪ್ರಮಾಣ ಪತ್ರ ಪಡೆಯಲು ಆಧಾರ ಕಡ್ಡಾಯವಲ್ಲ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.
ಮತ್ತೊಂದು ಅಧಿಸೂಚನೆಯ ಮೂಲಕ ಸರ್ಕಾರಿ ಕಚೇರಿಗಳಲ್ಲಿ ಬಳಸುವ ಬಯೋಮೆಟ್ರಿಕ್ಸ್ ಹಾಜರಾತಿ ವ್ಯವಸ್ಥೆಗಳಿಗೆ ಆಧಾರ್ ಕಡ್ಡಾಯವಲ್ಲ ಎಂದು ಸಹ ಹೇಳಿದೆ.