ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜನನಿ ಲಾಡ್ಜ್ ಮುಂಭಾಗದಲ್ಲಿ ಸೆಪ್ಟಂಬರ್ 11 ರಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಮಲಗಿದ್ದಲ್ಲೆ ಮೃತಪಟ್ಟಿದ್ದು, ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಮಣಿಪಾಲ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2570328, ಮೊ.ನಂ: 9480805475, 9480805448 ಅನ್ನು ಸಂಪರ್ಕಿಸುವಂತೆ ಮಣಿಪಾಲ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.