ಕುಂದಾಪುರ: ಕುಂದಾಪುರದ ಕೊಡೇರಿಯಲ್ಲಿ ಮೀನುಗಾರಿಕೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಅಬ್ಬರಕ್ಕೆ ಮಗುಚಿ ಬಿದ್ದ ಪರಿಣಾಮ ನಾಲ್ಕು ಮಂದಿ ಮೀನುಗಾರರು ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ.
ದೋಣಿಯಲ್ಲಿ ಒಟ್ಟು 9 ಮಂದಿ ಮೀನುಗಾರಿಕೆಗೆ ತೆರಳಿದ್ದು, ದೈತ್ಯ ಸಮುದ್ರದ ಅಲೆಗಳಿಗೆ ಸಿಲುಕಿಕೊಂಡ ದೋಣಿ ಏಕಾಏಕಿಯಾಗಿ ಮಗುಚಿ ಬಿದ್ದಿದೆ. ಇದರ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ಉಳಿದವರನ್ನು ರಕ್ಷಣೆ ಮಾಡಲಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.