ಶ್ರೀಕೃಷ್ಣಾಪುರ ಪರ್ಯಾಯೋತ್ಸವಕ್ಕೆ, ರಾಯಚೂರಿನ ಶ್ರೀಕೃಷ್ಣಭಕ್ತರಿಂದ 220 ಕ್ವಿಂಟಲ್ ಅಕ್ಕಿ ಮತ್ತು ಬೆಲ್ಲವನ್ನು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗು ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಮುಖಾಂತರ ಭಾವೀಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರಿಗೆ ಪರ್ಯಾಯ ಕಾಣಿಕೆಯಾಗಿ ಅರ್ಪಿಸಿದರು.
ಈ ಸಂದರ್ಭದಲ್ಲಿ, ಪರ್ಯಾಯೋತ್ಸವ ಸಮಿತಿಯ ಅಧ್ಯಕ್ಷರಾದ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ಜೊತೆಕಾರ್ಯದರ್ಶಿ ರಾಜಗೋಪಾಲ ಭಟ್, ಪ್ರವೀಣ ಉಪಾಧ್ಯಾಯ, ಹೊರೆಕಾಣಿಕೆ ಸಮಿತಿಯ ಸಂಚಾಲಕರಾದ ಸುಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.