ಘಾಜಿಯಾಬಾದ್: ಭಾರತದಲ್ಲಿ ಇಸ್ಲಾಂ ಅಪಾಯದಲ್ಲಿದೆ ಎಂಬ ಖೆಡ್ಡಕ್ಕೆ ಯಾರೂ ಬೀಳಬಾರದು. ಹಿಂದೂ-ಮುಸ್ಲಿಂ ಏಕತೆಯ ಹೆಸರಲ್ಲಿ ಮೊದಲು ಹಿಂದೂಗಳು ಮತ್ತು ಮುಸ್ಲಿಮರು ಒಂದೇ ಆಗಿದ್ದರು ಎಂಬ ದಾರಿತಪ್ಪಿಸುವ ಹೇಳಿಕೆಗಳಿಗೆ ಕಿವಿಕೊಡಬಾರದು. ಧರ್ಮವನ್ನು ಹೊರತು ಪಡಿಸಿ ಭಾರತೀಯರೆಲ್ಲರ ಡಿಎನ್ಎಗಳು ಒಂದೇ. ಆಚರಣೆಯ ಆಧಾರದಲ್ಲಿ ಅವರನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಭಾನುವಾರ ಘಾಜಿಯಾಬಾದ್ನಲ್ಲಿ ಮುಸ್ಲಿಂ ರಾಷ್ಟ್ರೀಯ ಮಂಚ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮುಸ್ಲಿಮರು ಭಾರತದಲ್ಲಿ ಇರಕೂಡದು ಎಂದು ಯಾರಾದರು ಹೇಳಿದರೆ, ಅಂತಹ ವ್ಯಕ್ತಿ ಹಿಂದೂವೇ ಅಲ್ಲ ಎಂದರು.
ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಹಿಂದೂಗಳು ಅಥವಾ ಮುಸ್ಲಿಮರು ಒಬ್ಬರ ಮೇಲೊಬ್ಬರು ಪ್ರಾಬಲ್ಯ ಸಾಧಿಸುವಂತಿರಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಗೋವು ಪವಿತ್ರವಾದ ಪ್ರಾಣಿ. ಆದರೆ ಬೇರೆಯವರನ್ನು ಹತ್ಯೆ ಮಾಡಲು ಪ್ರಯತ್ನಿಸುತ್ತಿರುವವರು ಹಿಂದುತ್ವದ ವಿರುದ್ಧ ಹೋಗುತ್ತಿದ್ದಾರೆ. ಅಂತಹವರ ವಿರುದ್ಧ ಪಕ್ಷಪಾತವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.