ಉಡುಪಿ: ಸೇನಾಪಡೆಗಳ (ಸಿಡಿಎಸ್) ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ತಮಿಳುನಾಡಿನ ಊಟಿಯಲ್ಲಿ ಇಂದು ಬುಧವಾರ(ಡಿಸೆಂಬರ್ 08) ಮಧ್ಯಾಹ್ನ ಅಪಘಾತಕ್ಕೀಡಾಗಿದೆ ಮಾಧ್ಯಮಗಳು ವರದಿ ಮಾಡಿದೆ.
ಹೆಲಿಕಾಪ್ಟರ್ ನಲ್ಲಿ ಬಿಪಿನ್ ರಾವತ್ ಸೇರಿದಂತೆ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಮೂವರು ಅಧಿಕಾರಿಗಳನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಅಧಿಕಾರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಕ್ಷಿಸಲಾಗಿದೆ. ಗಾಯಗೊಂಡ ಸೇನಾ ಹಿರಿಯ ಅಧಿಕಾರಿಗಳನ್ನು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್ ಗೆ ಕರೆದೊಯ್ಯಲಾಗಿದೆ ಎಂದು ವರದಿ ಹೇಳಿದೆ.