ರಾಜ್ಯದಲ್ಲಿ ಬಾಕಿ ಇರುವ ಚುನಾವಣೆಗಳಿಗೆ ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಬಾಕಿ ಇರುವ ನಗರ, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರ ಹಸಿರು ನಿಶಾನೆ ನೀಡಿದೆ.

ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆಗಳ ಅಧ್ಯಕ್ಷ, ಉಪಾಧ್ಯಕ್ಷ, ಮೇಯರ್‌ ಮತ್ತು ಉಪ ಮೇಯರ್‌ ಹಾಗೂ ಇತರ ಪದಾಧಿಕಾರಿಗಳ ಆಯ್ಕೆಗೆ ಬಾಕಿ ಇರುವ ಚುನಾವಣೆಗಳನ್ನು ನಡೆಸಲು ಮಂಗಳವಾರದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಹಕಾರ ಸಂಘಗಳು, ನೋಂದಾಯಿತ ಸೊಸೈಟಿಗಳು, ಸಂಘ, ಸಂಸ್ಥೆಗಳ ಪದಾಧಿಕಾರಿಗಳನ್ನು ಒಳಗೊಂಡಂತೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗಳನ್ನೂ ನಡೆಸಲು ಸಂಪುಟ ತೀರ್ಮಾನಿಸಿದೆ ಎಂದು ಮಾಹಿತಿ ನೀಡಿದ್ದಾರೆ.