ಉಡುಪಿ: ಜಿಲ್ಲೆಯಲ್ಲಿ 14 ದಿನಗಳ ಕೋವಿಡ್ ಕರ್ಪ್ಯೂ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ಗಂಟೆಯಿಂದ 10ಗಂಟೆ ವರೆಗೆ ಅವಕಾಶ ನೀಡಲಾಗಿತ್ತು. ಆದರೆ ಇದೀಗ ಸರಕಾರದ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಹೊರಡಿಸಿರುವ ಆದೇಶದಂತೆ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲು ಮಾರಾಟ ಮಳಿಗೆಗಳಲ್ಲಿ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಹಾಲು ಮಾರಾಟ ಮಾಡಲು ಅನುಮತಿ ನೀಡಲಾಗಿದೆ.