ಬೆಂಗಳೂರು: ರಾಜ್ಯ ಸರ್ಕಾರ ಲಾಕ್ಡೌನ್ ನಿರ್ಬಂಧವನ್ನು ಮತ್ತಷ್ಟು ಸಡಿಲಿಸಿದ್ದು, ಅದರಂತೆ ರಾಜ್ಯದಾದ್ಯಂತ ಕಂಟೈನ್ಮೆಂಟ್ ಪ್ರದೇಶ ಹೊರತುಪಡಿಸಿ ಉಳಿದೆಡೆಗಳಲ್ಲಿ ಎಲ್ಲ ಉದ್ಯಾನವನಗಳನ್ನು (ಪಾರ್ಕ್ಗಳು) ಬೆಳಿಗ್ಗೆ 5 ರಿಂದ ರಾತ್ರಿ 9 ಗಂಟೆ ಅವಧಿಯ ಒಳಗೆ ತೆರೆಯುವ ಸಮಯವನ್ನು ಸ್ಥಳೀಯ ಮಹಾನಗರಪಾಲಿಕೆ, ಪಾಲಿಕೆಗಳು ನಿರ್ಧರಿಸಬಹುದು ಎಂದು ಆದೇಶ ಹೊರಡಿಸಿದೆ.
ಈ ಹಿಂದಿನ ಆದೇಶದಂತೆ ಎಲ್ಲ ಪಾರ್ಕ್ಗಳನ್ನು ಬೆಳಿಗ್ಗೆ 7ರಿಂದ 9 ಗಂಟೆವರೆಗೆ ಮತ್ತು ಸಂಜೆ 4ರಿಂದ 7 ಗಂಟೆವರೆಗೆ ಸಾರ್ವಜನಿಕರಿಗಾಗಿ ತೆರೆಯಲಾಗುತ್ತಿತ್ತು. ಇನ್ನು ಮುಂದೆ, ಆಯಾ ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.












