ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಕಾರ್ಕಳ ತಾಲೂಕು ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಅಂಜರಾಡಿ ನಿವಾಸಿ ಭಾಸ್ಕರ (66) ಎಂಬ ವ್ಯಕ್ತಿಯು ಏಪ್ರಿಲ್ 18 ರಂದು ಬೆಳಗ್ಗೆ 8.30 ರ ಸುಮಾರಿಗೆ ಪೇಟೆಗೆ ಹೋಗಿ ಬರುವುದಾಗಿ ಮನೆಯವರಲ್ಲಿ ಹೇಳಿ ಹೋದವರು ಇದುವರೆಗೂ ಮನೆಗೆ ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.

155 ಸೆಂ.ಮೀ. ಎತ್ತರ, ಗೋಧಿ ಮೈಬಣ್ಣ, ಕೋಲುಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಮತ್ತು ತುಳು ಭಾಷೆ ಮಾತನಾಡಬಲ್ಲವರಾಗಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.