ನಿನ್ನೆ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ (Gold Price) ಶನಿವಾರ ಪೇಟೆಯಲ್ಲಿಂದು ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಹೌದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 160 ರೂ ಇಳಿಕೆಯಾದ್ದು, ಬೆಳ್ಳಿಯ ಬೆಲೆಯಲ್ಲಿ ಇಂದು ಕೂಡ 300 ರೂ ಏರಿಕೆಯಾಗಿದೆ. ಚಿನ್ನ, ಬೆಳ್ಳಿ ಖರೀದಿಸುವ ಪ್ಲಾನ್ ಮಾಡಿದ್ದರೆ ಒಮ್ಮೆ ಬೆಲೆಗಳನ್ನು ಪರಿಶೀಲಿಸಿ ನಂತರ ಖರೀದಿಸಿ.
ರಾಜ್ಯದಲ್ಲಿ ಚಿನ್ನ, ಬೆಳ್ಳಿ ದರದ ಮಾಹಿತಿ ಹೀಗಿದೆ.
ಹೌದು, ಕರ್ನಾಟಕದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 160 ರೂ ಇಳಿಕೆಯಾಗಿ 59,890ರೂ (ನಿನ್ನೆ 60,050)ಗೆ ತಲುಪಿದೆ. ಹಾಗೆಯೇ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯೂ 150 ರೂ ಇಳಿಕೆಯಾಗಿ 54,900ರೂ(ನಿನ್ನೆ 55,050) ಆಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಇಂದು ಕೂಡ 300 ರೂ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ರೂ.76,000(ನಿನ್ನೆ ರೂ.75,700) ಆಗಿದೆ.ಇನ್ನು, ರಾಜ್ಯದ ಇತರೆ ಪ್ರಮುಖ ನಗರಗಳಾದ ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮೈಸೂರು ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಇದೇ ದರಗಳಲ್ಲಿ ಮಾರಾಟವಾಗುತ್ತಿವೆ.
ದೇಶದ ಇತರೆ ಪ್ರಮುಖ ನಗರಗಲ್ಲಿನ ಚಿನ್ನಬೆಳ್ಳಿ ದರ:
ಹೈದರಾಬಾದ್ ನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಮೇಲೆ 160 ರೂಪಾಯಿ ಇಳಿಕೆಯಾದ ನಂತರ 59,840 ರೂಪಾಯಿ ಇದ್ದು, ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ 300 ರೂಪಾಯಿ ಏರಿಕೆಯಾಗಿದ್ದು, ಪ್ರಸ್ತುತ 76,000 ರೂಪಾಯಿಗೆ ವ್ಯಾಪಾರ ಆಗುತ್ತಿದೆ.
ಚೆನ್ನೈನಲ್ಲಿ ಚಿನ್ನದ ಬೆಲೆಯಲ್ಲಿ ವ್ಯತ್ಯಾಸವಿದ್ದು, ಚೆನ್ನೈನಲ್ಲಿ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆಯಲ್ಲಿ 100 ರೂಪಾಯಿ ಇಳಿಕೆಯಾಗಿ 55,500 ರೂಪಾಯಿಗೆ ತಲುಪಿದ್ದು, 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 100 ರೂಪಾಯಿ ಕಡಿಮೆಯಾದ ಬಳಿಕ 60,550 ರೂಪಾಯಿ ಇದ್ದು, ಕೆಜಿ ಬೆಳ್ಳಿ 76,000 ರೂಪಾಯಿ ಇದೆ.
ಇನ್ನು, ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 54,850 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 59,840 ರೂಪಾಯಿ ಇದ್ದು, ಬೆಳ್ಳಿ ಬೆಲೆಯಲ್ಲಿ 300 ರೂಪಾಯಿ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 73,300 ರೂಪಾಯಿ ಇದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 54,950 ರೂ., 24 ಕ್ಯಾರೆಟ್ ಚಿನ್ನದ ಬೆಲೆ 59,990 ರೂಪಾಯಿಯಲ್ಲಿ ವ್ಯಾಪಾರ ಮುಂದುವರೆಯುತ್ತಿದ್ದು, ಬೆಳ್ಳಿ ಬೆಲೆ 73,300 ರೂಪಾಯಿಗೆ ವಹಿವಾಟು ನಡೆಸುತ್ತಿದೆ.