ಉಡುಪಿ: ಪಕ್ಷ ಸಂಘಟನೆಯಲ್ಲಿ ತಳಮಟ್ಟದ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಹೇಳಿದರು.
ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಿಜೆಪಿ ಕಾರ್ಯಕರ್ತರಿಗೆ ಮನ್ನಣೆ ನೀಡುವ ಪಕ್ಷ. ಇತರ ಪಕ್ಷಗಳಂತೆ ಕುಟುಂಬದವರಿಗೆ ಗೌರವ ಕೊಡುವ ಪಕ್ಷವಲ್ಲ. ಇತ್ತೀಚಿನ ದಿನಗಳಲ್ಲಿ ನಮ್ಮಲ್ಲಿ ಕಾರ್ಯಕರ್ತರಿಗೆ ಹೆಚ್ಚೆಚ್ಚು ಸ್ಥಾನಮಾನಗಳನ್ನು ನೀಡಲಾಗುತ್ತಿದೆ ಎಂದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಕುಮಾರ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ನಗರ ಬಿಜೆಪಿ ಉಪಾಧ್ಯಕ್ಷರುಗಳಾದ ವೆಂಕಟ್ರಮಣ ಕಿದಿಯೂರು, ವಿಜಯ ಕೊಡವೂರು, ಕೃಷ್ಣಪ್ಪ ಜತ್ತನ್ ಮಲ್ಪೆ, ಕಾರ್ಯದರ್ಶಿಗಳಾದ ರಾಜೇಂದ್ರ ಪಂದುಬೆಟ್ಟು, ದಯಶಿನಿ ಪಾಂಡುರಂಗ , ಲಕ್ಷ್ಮೀ ಶೆಟ್ಟಿ ಕಿನ್ನಿಮೂಲ್ಕಿ, ಕೋಶಾಧಿಕಾರಿ ಸಂತೋಷ್ ಆಚಾರ್ಯ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ ನಿರೂಪಿಸಿದರು. ದಿನೇಶ್ ಅಮೀನ್ ವಂದಿಸಿದರು.