ಹುತಾತ್ಮರಾದ ವೀರ ಯೋಧರ ಬಲಿದಾನ ವ್ಯರ್ಥವಾಗದು: ಕುಯಿಲಾಡಿ

ಉಡುಪಿ: ನಕ್ಸಲ್ ಪಿಡುಗನ್ನು ಬೇರು ಸಹಿತ ಕಿತ್ತೊಗೆಯುವ ಕಾಲ ಸನ್ನಿಹಿತವಾಗಿದೆ. ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ವೀರ ಯೋಧರ ತ್ಯಾಗ, ಬಲಿದಾನ ವ್ಯರ್ಥವಾಗದು. ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಗೃಹ ಸಚಿವ ಅಮಿತ್ ಷಾ ನಕ್ಸಲ್ ಚಟುವಟಿಕೆಗಳನ್ನು ಹತ್ತಿಕ್ಕಲು ಕಠಿಣ ಕ್ರಮಗಳನ್ನು ಜರಗಿಸುವ ಮೂಲಕ ಸೈನಿಕರ ಬಲಿದಾನಕ್ಕೆ ತಕ್ಕ ಪ್ರತ್ಯುತ್ತರ ನೀಡುವ ಸಂಕಲ್ಪಗೈದಿದ್ದಾರೆ. ಇಡೀ ದೇಶ ಇಂದು ಹುತಾತ್ಮ ಸೈನಿಕರ ಕುಟುಂಬದ ಜೊತೆಗಿದೆ. ಕೇಂದ್ರ ಸರ್ಕಾರದ ನಿರ್ದಿಷ್ಟ ಕಠಿಣ ಕ್ರಮಗಳಿಂದ ನಕ್ಸಲ್ ವಾದ ದೇಶದಿಂದ ಮುಕ್ತವಾಗುವ ಭರವಸೆ ಇದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಛತ್ತೀಸ್ ಗಢದ ದಟ್ಟಾರಣ್ಯದಲ್ಲಿ ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆಯ ಸಂದರ್ಭದ ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಸ್ಮರಣಾರ್ಥ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ನೇತೃತ್ವದಲ್ಲಿ ನಡೆದ ಹುತಾತ್ಮ ವೀರ ಯೋಧರಿಗೆ ಅಂತಿಮ ನಮನದಲ್ಲಿ ಪುಷ್ಪಾರ್ಚನೆಗೈದು, ಮೊಂಬತ್ತಿ ಬೆಳಗಿಸಿ, ಮೌನ ಪ್ರಾರ್ಥನೆಯೊಂದಿಗೆ ಅಗಲಿದ ದಿವ್ಯಾತ್ಮಗಳಿಗೆ ಚಿರಶಾಂತಿ ಕೋರಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಸಹವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ವಿನೋದ್ ರಾಜ್ ಕುಂದಾಪುರ, ಉಪಾಧ್ಯಕ್ಷರಾದ ಅಕ್ಷಿತ್ ಶೆಟ್ಟಿ ಹೆರ್ಗ, ಸುಮಿತ್ ಮಡಿವಾಳ, ವಿಜೇತ್, ಕಾರ್ಯದರ್ಶಿಗಳಾದ ಅಭಿರಾಜ್ ಸುವರ್ಣ, ಸತೀಶ್ ಪೂಜಾರಿ, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಉಪಾಧ್ಯಕ್ಷ ಪ್ರಜೀತ್ ಆಚಾರ್ಯ, ಕಾರ್ಯದರ್ಶಿಗಳಾದ ಶರತ್, ಶ್ರೀವತ್ಸ, ಸಂದೇಶ್ ಪ್ರಭು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸೂರಜ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.