ಮಂಗಳೂರು: ವಿವಾಹವಾದ ಮರುದಿನವೇ ವಧು ಹೃದಯಾಘಾತದಿಂದ ನಿಧನ ಹೊಂದಿದ ದಾರುಣ ಘಟನೆ ಮಂಗಳೂರಿನ ಅಡ್ಯಾರ್ ಕಣ್ಣೂರು ಸಮೀಪದ ಬೀರ್ಪುಗುಡ್ಡೆ ಎಂಬಲ್ಲಿ ಇಂದು ಸಂಭವಿಸಿದೆ.
ಮಂಗಳೂರಿನ ಅಡ್ಯಾರ್ ಕಣ್ಣೂರು ಸಮೀಪದ ಬೀರ್ಪುಗುಡ್ಡೆ ಜಮಾಅತ್ ಅಧ್ಯಕ್ಷ ಕೆಎಚ್ಕೆ ಅಬ್ದುಲ್ ಕರೀಂ ಹಾಜಿ ಎಂಬವರ ಪುತ್ರಿ ಲೈಲಾ ಆಫಿಯಾ (23) ಮೃತ ದುರ್ದೈವಿ. ಲೈಲಾ ಆಫಿಯಾ ಅವರ ವಿವಾಹವು ಕಣ್ಣೂರಿನ ಮದುಮಗ ಮುಬಾರಕ್ ರೊಂದಿಗೆ ಭಾನುವಾರ ನಡೆದಿತ್ತು.
ಔತಣಕೂಟದ ಬಳಿಕ ಮದುಮಗ ಮುಬಾರಕ್ ಅತ್ತೆಯ ಮನೆಗೆ ಆಗಮಿಸಿದ್ದರು. ಮನೆಯಲ್ಲಿ ಸಂಭ್ರಮ ಕಳೆಕಟ್ಟಿತ್ತು. ಆದರೆ ಇಂದು ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಲೈಲಾ ಆಫಿಯಾ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಕೊನೆಯುಸಿರೆಳೆದಿದ್ದಾರೆ. ಮದುವೆಯ ಸಂಭ್ರಮದಲ್ಲಿದ್ದ ಮನೆಯಲ್ಲಿ ನೀರವ ಮೌನ ಆವರಿಸಿದೆ.