ರಂಗಶಿಕ್ಷಣ ಡಿಪ್ಲೋಮಾ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೈಸೂರಿನ ರಂಗಾಯಣ ರಂಗಶಿಕ್ಷಣ ಕೇಂದ್ರದಲ್ಲಿ ಹತ್ತು ತಿಂಗಳ ರಂಗಶಿಕ್ಷಣ ಡಿಪ್ಲೋಮಾ ತರಬೇತಿಗೆ, ರಂಗಭೂಮಿಯ ಕುರಿತು ಪ್ರಾಥಮಿಕ ಅನುಭವ ಹೊಂದಿರುವ, ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ಉತ್ತೀರ್ಣರಾಗಿರುವ 18 ರಿಂದ 28 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಹಾಗೂ ಮಾಹೆಯಾನ 5,000 ರೂ. ವಿದ್ಯಾರ್ಥಿ ವೇತನ ಪಾವತಿಸಲಾಗುವುದು.

ಅರ್ಜಿ ಸಲ್ಲಿಸಲು ಜೂನ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  ರಂಗಾಯಣದ ವೆಬ್‌ಸೈಟ್
http://rangayanamysore.karnataka.gov.in ಅಥವಾ ಉಪ ನಿರ್ದೇಶಕರು, ರಂಗಾಯಣ, ಮೈಸೂರು ದೂರವಾಣಿ ಸಂಖ್ಯೆ: 0821-2512639, 9448938661, 914882772, 8867514311 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.