ಬೆಂಗಳೂರು: ಶಾಲಾ ಕಾಲೇಜುಗಳನ್ನು ಆರಂಭಿಸುವ ಕುರಿತಂತೆ ರಾಜ್ಯ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹಾಗಾಗಿ ಸದ್ಯಕ್ಕೆ ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸುವ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಶಾಲಾ ಕಾಲೇಜುಗಳನ್ನು ಆರಂಭಿಸುವ ಕುರಿತಂತೆ ರಾಜ್ಯ ಸರ್ಕಾರಕ್ಕೆ ಯಾವುದೇ ಧಾವಂತ ಇಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಹಾಗಾಗಿ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳನ್ನು ಸದ್ಯಕ್ಕೆ ಒಪನ್ ಮಾಡುವುದಿಲ್ಲ. ಆ ಮೂಲಕ ಪೋಷಕರಲ್ಲಿ ಮೂಡಿದ್ದ ಗೊಂದಲಗಳಿಗೆ ತೆರೆಎಳೆದಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಬಾರದೆ ಆರಂಭವಿಲ್ಲ:
ಕೊರೊನಾ ನಿಯಂತ್ರಣಕ್ಕೆ ಬಂದರೆ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಶಾಲಾ ಕಾಲೇಜುಗಳನ್ನು ತೆರೆಯುವ ಸಾಧ್ಯತೆವಿದೆ ಎನ್ನಲಾಗಿದೆ. ಅದು ಎಷ್ಟು ಸಾಧ್ಯ ಎನ್ನುವುದನ್ನು ಕಾದುನೋಡಬೇಕಿದೆ.