ಮಂಗಳೂರು: ರಾಜ್ಯ ಸರ್ಕಾರದಿಂದ ಹೊಸ ಕೋವಿಡ್ ಗೈಡ್ ಲೈನ್ಸ್ ಪ್ರಕಟ ಹಿನ್ನೆಲೆಯಲ್ಲಿ ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮತ್ತು ಕಮಿಷನರ್ ಶಶಿಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮದುವೆ ಹೊರಡಿಸಲಾಗಿರುವ ಮಾರ್ಗಸೂಚಿಯ ಬಗ್ಗೆ ಮಾಹಿತಿ ನೀಡಿದರು.
ಕೋವಿಡ್ ಗೈಡ್ ಲೈನ್ಸ್ ವಿವರ:
* ವೀಕೆಂಡ್ ಕರ್ಫ್ಯೂ ಸಮಯದಲ್ಲಿ ನಿಗದಿಯಾಗಿದ್ದ ಮದುವೆ ನಡೆಸಲು ಅನುಮತಿ ಇದೆ. ಆದರೆ ಕೇವಲ 50 ಜನರು ಮಾತ್ರ ಮದುವೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
* ಇದಕ್ಕಾಗಿ ಮದುವೆ ಮನೆಯವರು 50 ಜನರ ಪಟ್ಟಿ ತಯಾರಿಸಬೇಕು. ಆ ಪಟ್ಟಿಯನ್ನು ಸ್ಥಳೀಯಾಡಳಿತಕ್ಕೆ ತೋರಿಸಿ ಅಪ್ರೂವ್ ಮಾಡಿಸಿಕೊಳ್ಳಬೇಕು.
*ಆ ಬಳಿಕ 50 ಜನರ ಅನುಮತಿ ಪಡೆದ ಪತ್ರ ಮತ್ತು ಮದುವೆ ಆಮಂತ್ರಣ ಪತ್ರಿಕೆ ಹಾಗೂ ಮದುವೆಗೆ ಹೋಗುವವರಿಗೆ ಐಡಿ ಕಾರ್ಡ್ ಕಡ್ಡಾಯ ಆಗಿರುತ್ತದೆ.
*ಈ ಮೂರು ದಾಖಲೆಗಳನ್ನು ವಾಟ್ಸ್ ಅಪ್ ನಲ್ಲಿ ಪೊಲೀಸರಿಗೆ ತೋರಿಸಿ ಪ್ರಯಾಣಿಸಬಹುದು. ಆದರೆ ಮದುವೆ ಆಮಂತ್ರಣ ಪತ್ರಿಕೆಯ ನೈಜ ಪ್ರತಿ ಪ್ರಯಾಣದ ವೇಳೆ ಕೈಯ್ಯಲ್ಲಿರಲೇ ಬೇಕು.
*ಮದುವೆಗೆ ಗೆಸ್ಟ್ ಲಿಸ್ಟ್ ನಲ್ಲಿರುವವರ ಐಡಿ ತೋರಿಸಿದರಷ್ಟೇ ಪ್ರಯಾಣಕ್ಕೆ ಅವಕಾಶ.
*ಮದುವೆಗೆ ಹೋಗುವ ಕಾರಿನಲ್ಲಿ ಏಳೆಂಟು ಜನರನ್ನು ತುಂಬಿದ್ರೆ ಪ್ರಯಾಣಿಸಲು ಅವಕಾಶ ಇಲ್ಲ.
*ದೇವಸ್ಥಾನದಲ್ಲಿ ಮದುವೆ ನಡೆಯುವುದಾದರೆ 50 ಜನರನ್ನು ಸೇರಿಸಿ ಮಾಡಬಹುದು.
*ಈಗಾಗಲೇ ಮಾಡಿದ ನಿಯಮದಂತೆ ದೇವಸ್ಥಾನಗಳಲ್ಲಿ ಮದುವೆಗೆ ಅನುಮತಿ.
*ಮದುವೆ ಫೋಟೋಗ್ರಾಫರ್ಸ್, ಅರ್ಚಕರು ಎಲ್ಲರೂ 50 ಜನರ ಲಿಸ್ಟ್ ನಲ್ಲೇ ಬರುತ್ತಾರೆ.
*ದೇವಸ್ಥಾನದ ಧಾರ್ಮಿಕ ಕಾರ್ಯಗಳನ್ನು ಅರ್ಚಕರು ಸೇರಿಕೊಂಡು ಮಾಡಬೇಕು.
*ಆದರೆ ಯಾವುದೇ ಸಾರ್ವಜನಿಕರು ಈ ಆಚರಣೆಯಲ್ಲಿ ಭಾಗಿಯಾಗಲು ನಿಷೇಧವಿದೆ.
*ಈ ಆದೇಶ ಇವತ್ತಿನಿಂದಲೇ ಜಿಲ್ಲೆಯ ಎಲ್ಲಾ ದೇವಸ್ಥಾನಗಳಲ್ಲಿ ಜಾರಿಯಾಗಲಿದೆ.
*ಅವಶ್ಯಕತೆ ಪಾಸ್ ಮತ್ತು ಐಡಿ ಕಾರ್ಡ್ ಬಳಸಿ ಕುಟುಂಬದ ಜೊತೆ ಸಂಚರಿಸಲು ಅವಕಾಶವಿಲ್ಲ.
*ಯಾರ ಹೆಸರಿನಲ್ಲಿ ಪಾಸ್ ಮತ್ತು ಐಡಿ ಕಾರ್ಡ್ ಇದೆ, ಅವರಿಗಷ್ಟೇ ಸಂಚಾರಕ್ಕೆ ಅವಕಾಶ
*ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಬೆಳಿಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಇದೆ
*ಈ ವಸ್ತು ಖರೀದಿ ಅವರ ಮನೆಯ ಅಕ್ಕಪಕ್ಕದಲ್ಲೇ ಖರೀದಿಸಬೇಕು
*ವಾಹನ ಬಳಸಿ ಅಗತ್ಯ ವಸ್ತು ಖರೀದಿಗೆ ಹೋಗೋದಾದರೂ ಅದಕ್ಕೆ ಸೂಕ್ತ ಕಾರಣ ಬೇಕು
*ಅದನ್ನು ದುರುಪಯೋಗ ಪಡಿಸಿಕೊಂಡರೆ ಅಂಥವರ ವಿರುದ್ಧ ಕಾನೂನು ಕ್ರಮ
*ಅಗತ್ಯ ವಸ್ತುಗಳು ಸಹಜವಾಗಿ ನಡೆದುಕೊಂಡು ಹೋಗುವ ಅಂತರದಲ್ಲೇ ಸಿಗುತ್ತದೆ.