ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮೂರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

ಶಿವಪಾಡಿ: ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 24 ಶುಕ್ರವಾರದಂದು ನಡೆದ ಅತಿರುದ್ರ ಮಹಾಯಾಗದ ಮೂರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಅರ್ಬಿಯ ಶ್ರೀ ವೈಷ್ಣವಿದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ. ಜಯರಾಜ್ ಹೆಗ್ಡೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಮಾತನಾಡಿ ಪ್ರಕೃತಿಯನ್ನು ಪೂಜಿಸಿ ಬದುಕಿದಲ್ಲಿ ಜೀವನ ಸಾರ್ಥಕವಾಗುವುದು. ಪ್ರಕೃತಿಯನ್ನು ಉಳಿಸುವುದು ನಮ್ಮ ಕರ್ತವ್ಯ ಎಂದರು.

ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷ ಮಣಿಪಾಲದ ಆರ್. ರಾಜಪುರ ಸಾರಸ್ವತ ಮಹಾಸಭಾದ ಅಧ್ಯಕ್ಷ ಶ್ರೀಶ ನಾಯಕ್, ಬಾಲಾಜಿ ವೆಂಚರ್ಸ್ ನ ಉದ್ಯಮಿ ದೇವೀಚರಣ್, ಹವ್ಯಕ ಬ್ರಾಹ್ಮಣ ಸಮಾಜದ ಅಧ್ಯಕ್ಷ ಡಾ. ಉದಯ ಶಂಕರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಶಿವರಾಯ್, ಕಾರ್ಯಕ್ರಮದ ಪೋಷಕರು ಹಾಗೂ ದಾನಿಗಳಾದ ಮನೋಜ್ ಪ್ರಭು, ಪದ್ಮಶಾಲಿ ಸಮಾಜದ ಅಧ್ಯಕ್ಷ ರಾಮದಾಸ್ ಶೆಟ್ಟಿಗಾರ್, ದೇವಸ್ಥಾನದ ಮೊಕ್ತೇಸರ ದಿನೇಶ್ ಪ್ರಭು, ಸುಭಾಕರ ಸಾಮಂತ್, ಶಾಶ್ವತ ಟ್ರಸ್ಟಿ ದಿನೇಶ ಶ್ರೀಧರ ಸಾಮಂತ್, ಟ್ರಸ್ಟಿ ಸಂಜಯ ಪ್ರಭು, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ ಉಪಸ್ಥಿತರಿದ್ದರು.

ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಮಹೇಶ್ ಠಾಕೂರ್ ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ ವಂದಿಸಿದರು. ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಮದ್ದೋಡಿ ನಿರೂಪಿಸಿದರು.

ಧಾರ್ಮಿಕ ಉಪನ್ಯಾಸದ ಬಳಿಕ ಆರ್ಯಭಟ ಪ್ರಶಸ್ತಿ ಪುರಸ್ಕೃತ ಜಗದೀಶ್ ಆಚಾರ್ಯ ಪುತ್ತೂರು ಮತ್ತು ಬಳಗದವರ ‘ತುಳುನಾಡ ಗಾನ ಗಂಧರ್ವ ರಿಂದ “ಶಿವ ಗಾನಾಮೃತ” ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.