ಮಂಗಳೂರು: ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ರೈಲನ್ನು ಮಂಗಳೂರಿನವರೆಗೆ (Mangaluru) ವಿಸ್ತರಣೆ ಮಾಡಿ ರೈಲ್ವೆ ಮಂಡಳಿ ಆದೇಶ ಹೊರಡಿಸಿದೆ.
ಹೊಸ ವೇಳಾ ಪಟ್ಟಿಯ ಪ್ರಕಾರ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 6.15ಕ್ಕೆ ಹೊರಟು ಮಧ್ಯಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ. ತಿರುವನಂತಪುರದಿಂದ ಸಂಜೆ 4.05 ಕ್ಕೆ ಹೊರಟು ರಾತ್ರಿ 12.40ಕ್ಕೆ ಮಂಗಳೂರನ್ನು ತಲುಪಲಿದೆ. ಬುಧವಾರ ಹೊರತು ಪಡಿಸಿ ವಾರದ ಆರು ದಿನಗಳೂ ಈ ರೈಲು ಸಂಚರಿಸಲಿದೆ.
“ನನ್ನ ಕೋರಿಕೆಯನ್ನು ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರಿನವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.