ಚೆನ್ನೈ: ಏಪ್ರಿಲ್ 6ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಎಐಎಡಿಎಂಕೆ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಜನಪ್ರಿಯ ಯೋಜನೆಗಳನ್ನು ಘೋಷಿಸುವ ಮೂಲಕ ಮತದಾರರ ಒಲೈಕೆಗೆ ಮುಂದಾಗಿದೆ.
ಎಐಎಡಿಎಂಕೆ ಪ್ರಣಾಳಿಕೆಯಲ್ಲಿ ಏನಿದೆ.?:
ಪ್ರತಿ ಕುಟುಂಬಕ್ಕೂ ಒಂದು ಸರ್ಕಾರಿ ಉದ್ಯೋಗ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ವಾರ್ಷಿಕ 2GB ಡೇಟಾ ಹಾಗೆ ವಾರ್ಷಿಕವಾಗಿ 6 ಸಿಲಿಂಡರ್ಗಳನ್ನು ಮನೆ ಬಳಕೆಗೆ ನೀಡುವುದಾಗಿಯೂ ಪಕ್ಷ ಘೋಷಿಸಿದೆ. ಸೋಲಾರ್ ಒಲೆ ಮತ್ತು ವಾಶಿಂಗ್ಮಶಿನ್ಗಳನ್ನು ಎಲ್ಲಾ ಮನೆಗೂ ಒದಗಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದೆ.
ಸಿಎಎ ವಿರುದ್ಧವೂ ಹೋರಾಟ ನಡೆಸುವುದಾಗಿ ಭರವಸೆ ನೀಡಿರುವ ಎಐಎಡಿಎಂಕೆ ಪ್ರಣಾಳಿಕೆ ಅಚ್ಚರಿ ಹುಟ್ಟಿಸಿದೆ. ಸಿಎಎ ಜಾರಿಗೊಳಿಸಿದ್ದ ಬಿಜೆಪಿ ಜೊತೆ ಎಐಎಡಿಎಂಕೆ ಮೈತ್ರಿ ಹೊಂದಿದ್ದರೂ ಸಿಎಎ ವಿರುದ್ಧವೂ ಹೋರಾಟ ನಡೆಸುವುದಾಗಿ ಭರವಸೆ ನೀಡಿದೆ. ಜತೆಗೆ ಶ್ರೀಲಂಕಾದ ತಮಿಳು ನಿರಾಶ್ರಿತರಿಗೆ ದ್ವಿಪೌರತ್ವ ಒದಗಿಸುವುದಾಗಿ ಆಶ್ವಾಸನೆ ನೀಡಿದೆ. ಅಲ್ಲದೆ, ರಾಜೀವ್ ಗಾಂಧಿ ಹಂತಕರ ಬಿಡುಗಡೆಯ ಭರವಸೆಯನ್ನೂ ಪ್ರಣಾಳಿಕೆಯಲ್ಲಿ ನೀಡಲಾಗಿದೆ.

















