ಉಡುಪಿ: ಕೋವಿಡ್ ಲಸಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ದೂರುವುದು ಸರಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವವರಿಗೆ ಒಳ್ಳೆಯದಾಗುವುದಿಲ್ಲ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಉಡುಪಿಯಲ್ಲಿ ಇಂದು ಆಯೋಜಿಸಿದ ‘ಹಡಿಲುಭೂಮಿ ಕೃಷಿ ಆಂದೋಲನ’ಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೇಂದ್ರ ಸರ್ಕಾರ ದೇಶದ 80 ಕೋಟಿ ಜನರಿಗೆ ಉಚಿತ ಕೋವಿಡ್ ಲಸಿಕೆ ನೀಡುತ್ತಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡಬೇಕಾದರೆ ಸರ್ಕಾರಕ್ಕೆ ಎಷ್ಟು ಆರ್ಥಿಕ ಹೊರೆ ಬೀಳಲಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು ಪ್ರಧಾನಿಯನ್ನು ಟೀಕೆ ಮಾಡುವುದು ಸರಿಯಲ್ಲ ಎಂದರು.
ಜಾರಕಿಹೊಳಿ ಬಗ್ಗೆ ಅನುಕಂಪವಿದೆ:
ರಮೇಶ್ ಜಾರಕಿಹೊಳಿ ಅವರ ಬಗ್ಗೆ ಅನುಕಂಪವಿದೆ. ಅವರು ಆಕಸ್ಮಿಕವಾದ ಘಟನೆಗೆ ಬಲಿಯಾಗಿದ್ದಾರೆ. ಒಪ್ಪಿತ ಲೈಂಗಿಕ ಕ್ರಿಯೆ ಅಪರಾಧವಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ವಿಡಿಯೋದಲ್ಲಿ ಹೆಣ್ಣುಮಗಳ ವರ್ತನೆ ನೋಡಿದರೆ ಇಚ್ಛೆಪಟ್ಟು ಹೋಗಿದ್ದಾರೆ ಎಂಬ ಭಾವನೆ ವ್ಯಕ್ತವಾಗುತ್ತದೆ. ಹಾಗಾಗಿ ಈ ಪ್ರಕರಣದಲ್ಲಿ ಜಾರಕಿಹೊಳಿ ಅವರಿಗೆ ಶಿಕ್ಷೆ ಆಗಲಾರದು ಎಂದು ಮಾಧುಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.