ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು: ಮೂವರು ಸ್ಥಳದಲ್ಲೇ ಮೃತ್ಯು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ನೆಲಗುಳಿ ಬಳಿ ನಡೆದಿದೆ.

ಪುಂಡಲೀಕ್, ಕಲ್ಲಪ್ಪ,‌ ಕಿರಣ್ ಮೃತ ಯುವಕರು. UGCL ಎಂಬ ಖಾಸಗಿ ಎಂಬ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಐವರು ಯುವಕರು ನಿನ್ನೆ ರಾತ್ರಿ ರೆನಾಲ್ಟ್ ಡಸ್ಟರ್ ಕಾರಿನಲ್ಲಿ ಹೋಗ್ತಿದ್ದಾಗ ಈ ಘಟನೆ ಸಂಭವಿಸಿದೆ.

ಕೆರೆಗೆ ತಡೆಗೋಡೆ ಇಲ್ಲದ ಪರಿಣಾಮ, ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು 2 ಮೃತ ದೇಹ ಹೊರ ತೆಗೆದಿದ್ದಾರೆ. ಮತ್ತೊಂದು ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ. ಕಗ್ಗಲೀಪುರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.