ಕಾಪು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಉಚ್ಛಾಟನೆ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದುಕೊಂಡು ಪಕ್ಷದ ನಿಲುವನ್ನು ವಿರೋಧಿಸಿ ಬಿಜೆಪಿಯ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅವರ ಸೋಲಿಗೆ ಕಾರಣರಾಗಿರುವ ಮಾಲತಿ ಮತ್ತು ಅವರಿಗೆ

ಬೆಂಬಲಿಸಿರುವ ಗ್ರಾಮ ಪಂಚಾಯತ್ ಸದಸ್ಯರಾದ ಗಿರೀಶ್ ಸುವರ್ಣ ಹಾಗೂ ಫ್ರೀಡಾ ಡಿ’ಸೋಜಾ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಾಗಿ ಕಾಪು ಮಂಡಲ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌ ಸೂಚನೆಯಂತೆ 6 ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.