ಸಿಡಿಲಂದ್ರೆ ಭಯಬೀಳ್ತಿರಾ? ಹಾಗಿದ್ರೆ ಈ ಮುನ್ನೆಚ್ಚರಿಕೆ ಪಾಲಿಸಿ, ಸಿಡಿಲಿಂದ ಪಾರಾಗ್ತಿರಾ !

ಇನ್ನೇನು ಮಳೆಗಾಲ ಶುರುವಾಗಲಿದೆ. ಮಳೆಗಾಲದಲ್ಲಿ ಮಳೆಯ ಜೊತೆಜೊತೆಗೆ ಸಿಡಿಲಪ್ಪಳಿಸುವುದು ಮಾಮೂಲು.ಕೆಲವರಿಗಂತೂ ಸಿಡಿಲಂದ್ರೆ ಮೈನಡುಕ ಹುಟ್ಟಿಸುತ್ತದೆ.ವರ್ಷ ವರ್ಷ ಸಿಡಿಲೆರಗಿ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಕಡಿಮೆಯೇನಲ್ಲ.ಬಹುತೇಕ ಮಂದಿ ಸಿಡಿಲನ್ನು ನಿರ್ಲಕ್ಷಿಸಿ ಸಿಡಿಲು ಬರುವ ಹೊತ್ತಿಗೇನೇ ಮೊಬೈಲ್ ನಲ್ಲಿ ಮಾತಾಡೋದು, ಸುತ್ತಾಡೋದು,ಟಿ.ವಿ ನೋಡೋದು ಮೊದಲಾದ ಕೆಲಸಗಳನ್ನು ಮಾಡುದರಿಂದಲೇ ಜೀವ ಕಳೆದುಕೊಳ್ಳುತ್ತಿದ್ದಾರೆ.ಇಂತಹ ಅಪಾಯಕಾರಿ ಸಿಡಿಲಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲದಿದ್ದರೂ ಒಂದಷ್ಟು ಮುಂಜಾಗ್ರತಾ ಕ್ರಮ ಕೈಗೊಂಡರೆ ಸಿಡಿಲಿಂದ ಪಾರಾಗಬಹುದು.

ಹೀಗೆ ಮಾಡಿ:

  • ತಗ್ಗು ಪ್ರದೇಶ ಇಲ್ಲದೆ ಬಯಲಿನಲ್ಲೆ ಇರಬೇಕಾದರೆ. ನಿಮ್ಮ ತಲೆಯನ್ನು ಮೊಣಕಾಲುಗಳ ನಡುವೆ ಹುದುಗಿಸಿಕೊಳ್ಳಿ, ಇದು ಮಿಂಚಿನಿಂದ ಮೆದುಳಿಗೂ, ಹೃದಯಕ್ಕೂ ಆಗುವ ಹಾನಿಯನ್ನು ತಪ್ಪಿಸುತ್ತದೆ.
  • ಗುಡುಗು-ಮಿಂಚು ಬರಲಿದೆ ಎಂದು ಗೊತ್ತಾದಾಗ ನೀವು ಬಯಲಿನಲ್ಲಿದ್ದರೆ. ತಕ್ಷಣವೇ ಇರುವುದರಲ್ಲಿ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಿ. ನಿಲ್ಲ ಬೇಡಿ.
  • ಮರಗಳಿದ್ದ ಪ್ರದೇಶದಲ್ಲಿ ನೀವು ಇದ್ದರೆ, ಅಲ್ಲಿಂದ ಬೇಗನೆ ಹೊರಬರುವುದು ಒಳ್ಳೆಯದು. ಯಾಕೆಂದರೆ ಸಿಡಿಲು ಮೋಡದಿಂದ ಭೂಮಿಗೆ ಹರಿಯಲು ಮರದಂತಹ ಹಸಿ, ಒದ್ದೆ ವಸ್ತುವನ್ನೇ ಆರಿಸಿಕೊಳ್ಳುತ್ತದೆ.
  •  ಎತ್ತರದ ಗುಡ್ಡದ ಮೇಲಿದ್ದರೆ ತಗ್ಗಿಗೆ ಇಳಿರಿ, ಕುರಿ ಮಂದೆ ಅಥವಾ ಜಾನುವಾರುಗಳ ಮಧ್ಯ ನಿಂತಿದ್ದರೆ, ಅವುಗಳ ಮಧ್ಯದಲ್ಲಿ ಬಗ್ಗಿ ಕುಳಿತುಕೊಳ್ಳಿ,  ಯಾಕೆಂದರೆ ಮಿಂಚು ಪ್ರಾಣಿಗಳಿಗಿಂತ ಎತ್ತರವಿರುವ ಮನುಷನನ್ನೇ ಆರಿಸಿಕೊಳ್ಳುತ್ತದೆ.

ಹೀಗೆ ಮಾಡಲೇಬೇಡಿ:

  •   ಕೆರೆಯಲ್ಲಿ ಈಜುವುದು,ಸ್ನಾನ ಮಾಡುವುದು ಬೇಡ, ನೀರಿನಲ್ಲಿದ್ದರೆ ತಕ್ಷಣ ಹೊರಬನ್ನಿ .
  •   ವಿದ್ಯುತ್ ಕಂಬ, ಎಲಕ್ಟ್ರಿಕಲ್ ಟವರ್, ಮೊಬೈಲ್ ಟವರ್, ಟ್ರಾನ್ಸ್ ಫಾರ್ಮರ್ ಮುಂತಾದವುಗಳ ಹತ್ತಿರವೂ ಇರಬೇಡಿ.
  •   ತಂತಿಬೇಲಿ,ಬಟ್ಟೆ  ಒಣಹಾಕುವ ತಂತಿ, ಇವುಗಳಿಂದ ದೊರವಿರಿ.
  •   ಮಳೆ ಬರುವ ಸಮಯದಲ್ಲಿ ಮನೆಯ ಟೆರೇಸನ್ನು ಸ್ವಚ್ಛ ಮಾಡುವ ಸಾಹಸ ಬೇಡ.
  •   ಮನೆಯ ಕಿಟಕಿಯ ಬಳಿ ನಿಲ್ಲುವುದಕ್ಕಿಂತಲೂ ಮನೆಯ ಮಧ್ಯದಲ್ಲಿರುವುದು ಸುರಕ್ಷಿತ.
  •   ಗುಡುಗು-ಸಿಡಿಲಿನ ಸಂದರ್ಭದಲ್ಲಿ ಫೋನ್ ಮಾಡಬೇಡಿ. ಅದನ್ನು ಚಾರ್ಜ್ ಮಾಡುವ ಸಹಸವೂ ಬೇಡ.
  •   ಕಾರಿನಲ್ಲಿ ಪ್ರಯಾಣಿಸುತ್ತಿದ್ದರೆ ಗಾಜನ್ನು ಮುಚ್ಚಿಕೊಳ್ಳಿ. ಕಾರಿನ ಬಾಡಿಯನ್ನು ಸಾಧ್ಯವಾದಷ್ಟು ಸ್ಪರ್ಶಿಸದೆ ಮಧ್ಯದಲ್ಲಿ ಕುಳಿತುಕೊಳ್ಳುವುದು ಒಳ್ಳೆಯದು.
  •   ಕಂಪ್ಯೂಟರ್ ಗಳಿಂದ ದೂರ ಇರಿ ಮನೆಯ ಕಾoಕ್ರೇಟ್ ಗೋಡೆಗಳನ್ನು ಸ್ಪರ್ಶಿಸದೆ ಕೋಣೆಯ ಮಧ್ಯದಲ್ಲಿದ್ದರೆ ಹೆಚ್ಚು ಸುರಕ್ಷಿತ.  ಇವಿಷ್ಟು ಮಾಡಿದರೆ ಸಿಡಿಲಿಂದ ಪಾರಾಗಬಹುದು.ಈಗ ಮಳೆಗಾಲ ಬಂದಿದೆ.ಇವಿಷ್ಟು ಪಾಲಿಸಿ ಸಮೃದ್ದ ಮಳೆಗಾಲ ಎಂಜಾಯ್ ಮಾಡಿ