ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಸೇರಿದಂತೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಇಂದು ಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.