ಟಿಪ್ಪು ಸುಲ್ತಾನ್ ಈ ನೆಲದ ಮಗ, ಯಾವುದೇ ಪಕ್ಷ, ಧರ್ಮಕ್ಕೆ ಸೇರಿದವನಲ್ಲ: ಎಚ್. ವಿಶ್ವನಾಥ್

ಬೆಂಗಳೂರು: ಟಿಪ್ಪು ಸುಲ್ತಾನ್ ಈ ನೆಲದ ಮಗ, ವೀರ ಹೋರಾಟಗಾರ. ಟಿಪ್ಪು ಯಾವುದೇ ಪಕ್ಷ, ಜಾತಿ ಹಾಗೂ ಧರ್ಮಕ್ಕೆ ಸೇರಿದವನಲ್ಲ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬೆಳಗಾವಿ ಸುವರ್ಣ ಸೌಧದಲ್ಲಿ ಸಂಗ್ಗೊಳ್ಳಿ ರಾಯಣ್ಣ ಪ್ರತಿಮೆಗೆ ಸ್ಥಾಪನೆ ಮಾಡುವ ಬಗ್ಗೆ ಹೋರಾಟ ಮಾಡುವ ಕುರಿತಂತೆ ಹೇಳುವಾಗ ಟಿಪ್ಪುವನ್ನು ಹೊಗಳಿದ್ದಾರೆ. ಸಂಗ್ಗೊಳ್ಳಿ ರಾಯಣ್ಣ ಬ್ರಿಟಿಷ್ ವಿರುದ್ಧ ಹೋರಾಡಿದ ಕಮಾಂಡರ್. ಅದೇ ರೀತಿ ಟಿಪ್ಪು ಸುಲ್ತಾನ್ ಕೂಡ ಎಂದು ತಿಳಿಸಿದ್ದಾರೆ.
ಪಠ್ಯದಲ್ಲಿ ಟಿಪ್ಪು ಪಾಠ ಕೈ ಬಿಟ್ಟಿಲ್ಲ. ಐದನೇ ತರಗತಿಯಿಂದ ಏಳನೇ ತರಗತಿಗೆ ಹಾಕಿದ್ದಾರೆ. ಗಾಂಧೀಜಿಯಿಂದ ಹಿಡಿದು ಟಿಪ್ಪು ತನಕ ವಿದ್ಯಾರ್ಥಿಗಳು ಎಲ್ಲವನ್ನೂ ಓದಬೇಕು ಎಂದರು.