ಕಾಪು: ಬಿಜೆಪಿ ಯುವಮೋರ್ಚಾ ಕಾಪು ಮಂಡಲ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ “ತಿರಂಗಾ ಬೈಕ್ ಜಾಥಾ” ನಡೆಯಿತು.
ಈ ಸಂಧರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್,ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಬಿಜೆಪಿ ರಾಜ್ಯಕಾರ್ಯಕಾರಿಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ, ಬಿಜೆಪಿ ಯುವಮೋರ್ಚಾ ಕಾಪು ಮಂಡಲ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ ,ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಹಾಗೂ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು,ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.