ದಕ್ಷಿಣ ಕನ್ನಡ : ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
ಉಳಿದ ತಾಲೂಕಿನಲ್ಲಿ ಮಳೆ ಪರಿಸ್ಥಿತಿ ನೋಡಿ ರಜೆ ನೀಡಲು ಸೂಚಿಸಲಾಗಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಇಂದು ರಜೆ ಘೋಷಿಸಲಾಗಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜುಲೈ 4ರಂದು ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಹಶೀಲ್ದಾರ್‌ಗಳಿಗೆ ಶಾಲಾ-ಕಾಲೇಜಿಗೆ ರಜೆ ಘೋಷಿಸುವ ಅಧಿಕಾರ ನೀಡಿ ಡಿಸಿ ಆದೇಶಿಸಿದ್ದಾರೆ.












