ಉಡುಪಿ: ಜಿಲ್ಲಾ ಆಟೋಮೊಬೈಲ್ ಡೀಲರ್ ಅಸೋಸಿಯೇಶನ್ ಮತ್ತು ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಆಶ್ರಯದಲ್ಲಿ ಮಣಿಪಾಲ ಆಟೋ ಕ್ಲಬ್ ಸಹಕಾರದಲ್ಲಿ ಎಂಜಿಎಂ ಕಾಲೇಜಿನ ಕ್ರೀಡಾಂಗಣದಲ್ಲಿ ‘ಉಡುಪಿ ಆಟೋ ಎಕ್ಸ್‌ಪೋ-2023’ ಡಿ. 29 ರಂದು ಉದ್ಘಾಟನೆಗೊಂಡು ಇಂದು ಸಮಾರೋಪಗೊಳ್ಳಲಿದೆ.
33 ವಿವಿಧ ಅಟೋ ಕಂಪನಿಗಳ ಎಲ್ಲಾ ರೀತಿಯ ಸೌಲಭ್ಯಗಳು ಒಂದೇ ಸೂರಿನಡಿ ಲಭ್ಯವಿದೆ.
ಇಂದು ಸಂಜೆ 4ರಿಂದ ನಡೆಯಲಿರುವ ಸಮಾರೋಪದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10 ರಿಂದ ಕಲಾಮಯಂ ತಂಡದಿಂದ ಸಾಂಸ್ಕೃತಿಕ ಜಾನಪದ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2ರಿಂದ 3ರ ವರೆಗೆ ಅರವಿಂದ್ ಮೋಟಾರ್ ಅವರಿಂದ ಮೆಕ್ಯಾನಿಕ್ ತರಬೇತಿ ನಡೆಯಲಿದೆ ಮತ್ತು ವಿಂಟೇಜ್ ಕಾರ್ ಆ್ಯಂಡ್ ಸೂಪರ್ ಕಾರ್ ಶೋ, ಬೈಕ್ ಶೋ, ನೇತ್ರ ತಪಾಸಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ ಜರಗಲಿದೆ.
ಕಾರ್ಯಕ್ರಮಗಳ ಅಧ್ಯಕ್ಷತೆಯನ್ನು ಜಿಲ್ಲಾ ಆಟೋಮೊಬೈಲ್ ಡೀಲರ್ ಅಸೋಸಿಯೇಶನ್ ಕಾರ್ಯದರ್ಶಿ ಕಾಶಿನಾಥ್ ನಾಯಕ್ ವಹಿಸಲಿದ್ದಾರೆ.
ಬಹುಮಾನ ಗೆಲ್ಲುವ ಅವಕಾಶ
ಉಡುಪಿ ಆಟೋ ಎಕ್ಸ್‌ಪೋ-2023 ಕಾರ್ಯಕ್ರಮಕ್ಕೆ ಆಗಮಿಸಿದ ಪ್ರತಿಯೊಬ್ಬರಿಗೂ ಒಂದು ಕೂಪನ್ ನೀಡಲಾಗುವುದು. ಕೂಪನ್‌ನ ಲಕ್ಕಿ ಡ್ರಾ ಫಲಿತಾಂಶ ಮತ್ತು ಬಹುಮಾನ ವಿತರಣೆ ಸಮಾರೋಪ ಸಮಾರಂಭ ನಡೆಯಲಿದೆ. ಪ್ರಥಮ 5 ಗ್ರಾಂ, ದ್ವಿತೀಯ 3 ಗ್ರಾಂ, ತೃತೀಯ 1 ಗ್ರಾಂ ಚಿನ್ನ ಗೆಲ್ಲುವ ಅವಕಾಶ.
ಎಕ್ಸ್‌ಪೋದಲ್ಲಿ ವಿವಿಧ ಕಂಪೆನಿಗಳ ದ್ವಿಚಕ್ರ, ತ್ರಿಚಕ್ರ, ಕಾರು, ಜೀಪು, ಟೆಂಪೋ, ಬಸ್, ಲಾರಿ, ಎಲ್ಲ ಮಾದರಿಯ ಎಲೆಕ್ಟ್ರಿಕ್ ಮತ್ತು ಸಿಎನ್‌ಜಿ ವಾಹನಗಳ ಪ್ರದರ್ಶನ ನಡೆಯಲಿದೆ.
ಎಕ್ಸ್‌ಪೋ ನಡೆಯುವ ಸ್ಥಳದಲ್ಲೇ ವಾಹನಗಳ ಬುಕ್ಕಿಂಗ್ ಮಾಡಲು ಅವಕಾಶವಿದ್ದು, ಸ್ಥಳದಲ್ಲೇ ಬುಕ್ಕಿಂಗ್ ಮಾಡಿದವರಿಗೆ ಕಂಪೆನಿ ವತಿಯಂದ ವಿಶೇಷ ಕೊಡುಗೆ ದೊರೆಯಲಿದೆ. ಬ್ಯಾಂಕ್ ಸಾಲ ಸೌಲಭ್ಯ ದೊರೆಯಲಿದೆ. ವಿವಿಧ ಬ್ಯಾಂಕಿಂಗ್, ಹಣಕಾಸು ಸಾಲ ಸೌಲಭ್ಯ ನೀಡುವ ಸಂಸ್ಥೆಗಳು ಎಕ್ಸ್ ಪೋದಲ್ಲಿ ಭಾಗವಹಿಸಿವೆ.
.












