ಧೋನಿ ನಾಯಕತ್ವದಲ್ಲಿ ಭಾರತ ICC ಚಾಂಪಿಯನ್ಸ್ ಟ್ರೋಫಿ ಗೆದ್ದು ಇಂದಿಗೆ 10 ವರ್ಷ:

ನವದೆಹಲಿ: 2013ರ ಜೂನ್ 23ರಂದು ಬ್ರಿಟನ್ನ ಎಡ್ಜ್ಬಾಸ್ಟನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಜಯ ಸಾಧಿಸಿತ್ತು.
ಭಾರತ ಕ್ರಿಕೆಟ್ ತಂಡವು ಮಹೇಂದ್ರ ಸಿಂಗ್ ಧೋನಿ ಅವರ ನಾಯಕತ್ವದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಇಂದಿಗೆ 10 ವರ್ಷಗಳು ಕಳೆದಿವೆ.

ಈ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದಿದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಿತ್ತು.

ಈ ಗುರಿ ಬೆನ್ನತ್ತಿದ್ದ ಇಂಗ್ಲೆಂಡ್ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 124 ರನ್ ಗಳಿಸಿ 5 ರನ್ ಅಂತರದಿಂದ ಸೋಲು ಕಂಡಿತ್ತು.

ಪಂದ್ಯಕ್ಕೆ ಮಳೆ ಅಡಚಣೆಯಾಗಿತ್ತು. ಇದರಿಂದಾಗಿ 6 ತಾಸು ವಿಳಂಬವಾಗಿ ಆರಂಭವಾದ ಪಂದ್ಯವನ್ನು 20 ಓವರ್ಗಳಿಗೆ ಸೀಮಿತಗೊಳಿಸಲಾಗಿತ್ತು.
ಸಾಮಾಜಿಕ ಜಾಲತಾಣಗಳಲ್ಲಿ ನೆನಪುಗಳನ್ನು ಮೆಲುಕು ಹಾಕಿರುವ ಕ್ರೀಡಾಭಿಮಾನಿಗಳು ‘ಕೂಲ್ ಕ್ಯಾಪ್ಟನ್’ ಧೋನಿ ನಾಯಕತ್ವದ ಟೀಮ್ ಇಂಡಿಯಾ ಆಟಗಾರರ ಆಟವನ್ನು ಸ್ಮರಿಸಿದ್ದಾರೆ.