ಉಡುಪಿ: ಇಂದು 375 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು 375 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9041 ಕ್ಕೆ ಏರಿಕೆಯಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 111 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 70 ಮಂದಿ ಸಹಿತ 181 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ 6132 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇನ್ನೂ 2831 ಸಕ್ರಿಯ ಕೊರೊನಾ ಸೋಂಕಿತರಿದ್ದು, 1303 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1528 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.