ಬೆಂಗಳೂರು: ನಾಳೆಯಿಂದಲೇ (ಜೂನ್ 15) ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಜುಲೈ 1ರಿಂದ ಶಾಲಾ ತರಗತಿಗಳು ಆರಂಭವಾಗಲಿದೆ.
ಈ ಬಾರಿಯ ಶೈಕ್ಷಣಿಕ ವರ್ಷದ ಆರಂಭದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆ ಆಯುಕ್ತರಾದ ಅನ್ಬುಕುಮಾರ್ ಸೂಚಿಸಿದ್ದಾರೆ.
ಜೂನ್ 15ರಿಂದ ಮಕ್ಕಳ ಶಾಲಾ ದಾಖಲಾತಿ ಪ್ರಾರಂಭಿಸಿ ಆಗಸ್ಟ್ 31ರೊಳಗೆ ಮುಕ್ತಾಯಗೊಳಿಸಬೇಕು. ಲಾಕ್ ಡೌನ್ ಇರೋ ಜಿಲ್ಲೆಯವರು ಪಾಸ್ನೊಂದಿಗೆ ಶಾಲೆಗೆ ಬರಬೇಕು. ಈಗಾಗಲೇ ಒಂದು ಶೈಕ್ಷಣಿಕ ವರ್ಷ ತಡವಾಗಿದೆ.. ಶಿಕ್ಷಕರು ಅನ್ಯ ಕಾರಣ ನೀಡುವಂತಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಹೀಗಾಗಿ ಶೈಕ್ಷಣಿಕ ವರ್ಷ ಮೂಂದುಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಕೋವಿಡ್ ಹಿನ್ನೆಲೆ ತರಗತಿಗಳನ್ನು ಭೌತಿಕವಾಗಿ ನಡೆಸಲು ಸಾಧ್ಯವಾಗದೆ ಇದ್ದರೆ. ಪರ್ಯಾಯವಾಗಿ ಆನ್ಲೈನ್, ದೂರದರ್ಶನ, ಅಂತರ್ಜಾಲ ಕಲಿಕೆಯನ್ನು ನೀಡುವಂತೆ ಶಿಕ್ಷಣ ಇಲಾಖೆ ಆಯಕ್ತರು ಸೂಚನೆ ನೀಡಿದ್ದಾರೆ.
ರಾಜ್ಯದ ಎಲ್ಲಿಲ್ಲಿ ಲಾಕ್ಡೌನ್ ಮುಂದುವರೆದಿದೆಯೋ? ಆ ಜಿಲ್ಲೆಗಳಲ್ಲಿ ಒಂದು ವಾರ ಕಾಲ ಶಿಕ್ಷಕರಿಗೆ ವಿನಾಯಿತಿ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ನಾಳೆಯಿಂದ ಶೈಕ್ಷಣಿಕ ಚಟುವಟಿಕೆ ಆರಂಭವಾಗಲಿದೆ. ಜುಲೈ 1ರಿಂದ ಶಾಲೆಗಳಲ್ಲಿ ಬ್ರಿಡ್ಜ್ ಕೋರ್ಸ್ ಆರಂಭವಾಗಲಿದೆ.. ಜುಲೈ 15 ರಿಂದ ಶಾಲೆ ತರಗತಿ ಆರಂಭವಾಗಲಿದೆ. ಕೊರೊನಾ ಹತೋಟಿಗೆ ಬರುವವರೆಗೂ ಆನ್ಲೈನ್ ನಲ್ಲಿ ತರಗತಿ ಮುಂದುವರೆಯಲಿದೆ ಎಂದರು.