ಹೈದರಾಬಾದ್: ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನೆದರ್ಲೆಂಡ್ಸ್ ಮತ್ತು ಪಾಕಿಸ್ತಾನ ತಂಡಗಳ ನಡುವೆ ಸೆಣಸಾಟ ನಡೆಯುತ್ತಿದೆ.ಐಸಿಸಿ ಪುರುಷರ ವಿಶ್ವಕಪ್ 2023ರ ಎರಡನೇ ಪಂದ್ಯ ಇದಾಗಿದ್ದು ನೆದರ್ಲೆಂಡ್ಸ್ ನಾಯಕ ಸ್ಕಾಟ್ ಎಡ್ವರ್ಡ್ಸ್, ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ನಾಯಕ ಬಾಬರ್ ಅಜಮ್ ನೇತೃತ್ವದ ಪಾಕಿಸ್ತಾನ ತಂಡ ಬ್ಯಾಟಿಂಗ್ ಮಾಡುತ್ತಿದೆ . ಇಂದು ಪಾಕಿಸ್ತಾನ ಮತ್ತು ನೆದರ್ಲೆಂಡ್ಸ್ ಸೆಣಸಾಟ ನಡೆಸುತ್ತಿದ್ದು, ಟಾಸ್ ಗೆದ್ದ ನೆದರ್ಲೆಂಡ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ತಂಡಗಳು: ಉಭಯ ತಂಡಗಳು ಕೆಲವು ಸಣ್ಣ-ಪುಟ್ಟ ಬದಲಾವಣೆಗಳೊಂದಿಗೆ ಕಣಕ್ಕಿಳಿದ್ದಿದ್ದು ಎರಡೂ ತಂಡಗಳ ಆಡುವ 11ರ ಬಳಗ ಈ ಕೆಳಗಿನಂತಿದೆ.
ಪಾಕಿಸ್ತಾನ (ಪ್ಲೇಯಿಂಗ್ XI): ಇಮಾಮ್ – ಉಲ್ – ಹಕ್, ಫಖರ್ ಜಮಾನ್, ಬಾಬರ್ ಅಜಮ್(ನಾಯಕ), ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್
‘ತಂಡದ ಬ್ಯಾಟಿಂಗ್ ಬಲದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ತಂಡಕ್ಕೆ ಬೇಕಾದ ಉತ್ತಮ ಕೊಡುಗೆ ನೀಡುವಲ್ಲಿ ಪ್ರಯತ್ನ ಮಾಡುತ್ತೇವೆ. ಆರಂಭಿಕ ಆಟಗಾರರಾದ ಇಮಾಮ್-ಉಲ್-ಹಕ್ ಮತ್ತು ಫಖರ್ ಜಮಾನ್ ಉತ್ತಮ ರನ್ ತಂದುಕೊಡುವ ವಿಶ್ವಾಸವಿದೆ. ಶಾಹೀನ್ ಕೂಡ ನಮಗೆ ವರದಾನ. ಹಸನ್ ತಂಡಕ್ಕೆ ಮರಳಿದ್ದರಿಂದ 290-300 ಪ್ಲಸ್ ರನ್ ಗಳಿಸುವ ನಿರೀಕ್ಷೆಯಲ್ಲಿದ್ದೇವೆ’ ಎಂದು ಪಾಕಿಸ್ತಾನದ ತಂಡದ ನಾಯಕ ಬಾಬರ್ ಅಜಮ್ ತಂಡದ ಆಟಗಾರರ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
‘ನಾವು ಮೊದಲು ಬೌಲ್ ಮಾಡಲು ಇಚ್ಚಿಸುತ್ತೇವೆ. ಪವರ್ಪ್ಲೇಯಲ್ಲಿ ಬೌಲಿಂಗ್ ಮಾಡಬಲ್ಲ ಕೆಲವು ಗುಣಮಟ್ಟದ ಬೌಲರ್ಗಳು ಮತ್ತು ಸ್ಪಿನ್ನರ್ಗಳನ್ನು ನಾವು ಹೊಂದಿದ್ದೇವೆ. ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ’ ಎಂದು ನೆದರ್ಲ್ಯಾಂಡ್ಸ್ ಸ್ಕಾಟ್ ಎಡ್ವರ್ಡ್ಸ್ ಕೂಡ ತಮ್ಮ ತಂಡದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಇಂದಿನ ಪಂದ್ಯ ಸ್ವಲ್ಪ ರೋಚಕತೆಯಿಂದ ಕೂಡಿದೆ.ಪಾಕಿಸ್ತಾನವು ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಡಿದ ಎರಡೂ ಅಭ್ಯಾಸ ಪಂದ್ಯಗಳಲ್ಲಿ ಸೋತಿರುವುದು ಗಮನಾರ್ಹ. ವಿಶ್ವಕಪ್ ಅಭಿಯಾನದ ಆರಂಭಿಕ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧದ ಇಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಪಾಕ್ ತಂಡ ಕಮ್ ಬ್ಯಾಕ್ ಮಾಡುವ ನಿರೀಕ್ಷೆ ಇಟ್ಟುಕೊಂಡಿದೆ. ನೆದರ್ಲ್ಯಾಂಡ್ಸ್ ಕೂಡ ಪ್ರಬಲ ಸ್ಪರ್ಧೆಯೊಡ್ಡುವ ಉತ್ಸಾಹದಲ್ಲಿದೆ.