ಉಡುಪಿ: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ ಅವರು ಏಪ್ರಿಲ್ 17 ಮತ್ತು 18 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಏ. 17 ರಂದು ರಾತ್ರಿ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದು, ಏ. 18 ರಂದು ಬೆಳಗ್ಗೆ 11 ಗಂಟೆಗೆ ಕಾಪು ತಾಲೂಕು ಪಂಚಾಯತ್ ಕಚೇರಿಯಲ್ಲಿ, ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

















