ಉಡುಪಿ: ಜಿಲ್ಲೆಯಲ್ಲಿ ಸೆಪ್ಟಂಬರ್ 27 ರಂದು ಟೂರಿಸಂ ಎಂಡ್ ಗ್ರೀನ್ ಇನ್ವೆಸ್ಟ್ಮೆಂಟ್ (ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು) ಎಂಬ ಸಂದೇಶದೊಂದಿಗೆ ಪ್ರಸಕ್ತ ಸಾಲಿನ ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ, ಜಿಲ್ಲೆಗಳಲ್ಲಿನ ಹೋಟೆಲ್, ರೆಸಾರ್ಟ್ ಮತ್ತು ಹೋಮ್‌ಸ್ಟೇ ಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಸ್ವಚ್ಛತೆ, ಪರಿಸರ ಮಾಲಿನ್ಯ ತಡೆಗಟ್ಟಲು ಹಾಗೂ ನೈರ್ಮಲ್ಯ ಶುಚಿತ್ವದ ಬಗ್ಗೆ ಅರಿವು ಮೂಡಿಸುವುದು ಸೇರಿದಂತೆ ಇನ್ನಿತರೆ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಪ್ರಸ್ತುತಿ ಪಡಿಸಲು ಎಲ್ಲಾ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಈ ಕೆಳಕಂಡ ಸಾಮಾನ್ಯ ಸಲಹೆಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗಿರುತ್ತದೆ.
- ಜಿಲ್ಲೆಯ ಎಲ್ಲಾ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಈ ಬಾರಿಯ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಥೀಮ್ ಅನ್ನು ಪರಿಸರ ಸ್ನೇಹಿ ಬಟ್ಟೆ ಬ್ಯಾನರ್‌ನಲ್ಲಿ ಮುದ್ರಿಸಿ ಪ್ರದರ್ಶಿಸಬೇಕು.
- ಎಲ್ಲಾ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಸಾಂಪ್ರದಾಯಿಕ ಖಾದ್ಯಗಳನ್ನು ನೀಡಬೇಕು.
- ಪ್ರವಾಸಿ ತಾಣಗಳ ಕುರಿತ ವೀಡಿಯೋಗಳನ್ನು ಹೋಟೆಲ್‌ಗಳು ಹಾಗೂ ಕಚೇರಿಗಳಲ್ಲಿ ಪ್ರದರ್ಶಿಸಬೇಕು.
- ಸ್ವಚ್ಛತಾ ಅಭಿಯಾನಗಳನ್ನು ಕೈಗೊಳ್ಳುವುದರೊಂದಿಗೆ ಸಸಿಗಳನ್ನು ನೆಡುವುದು, ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳನ್ನು ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಬೇಕು.
- ಹೋಟೆಲ್ ಹಾಗೂ ರೆಸ್ಟೋರೆಂಟ್ ಕೊಠಡಿಗಳ ದರಗಳಲ್ಲಿ ವಿಶೇಷ ರಿಯಾಯಿತಿಯನ್ನು ನೀಡಬೇಕು.
- ಹೋಟೆಲ್‌ಗಳಲ್ಲಿ ಛಾಯಾಚಿತ್ರಗಳನ್ನೊಳಗೊಂಡ ಸೆಲ್ಫಿ ಪಾಯಿಂಟ್‌ಗಳನ್ನು ಅಳವಡಿಸಬೇಕು.
- ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿಗಳಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಕೈಗೊಳ್ಳುವ ಮೂಲಕ ಸಾಮಾನ್ಯ ಸಲಹೆಗಳನ್ನು ಪಾಲಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.