ಉಡುಪಿ, ಫೆ28: ರಾಜ್ಯದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಮಾರ್ಚ್ 1 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 3.30 ರಿಂದ ಸಂಜೆ 5 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿ ಕಟ್ಟಡ ಸಂಕೀರ್ಣದಲ್ಲಿರುವ, ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ, ಸಂಜೆ 6 ಗಂಟೆಗೆ ಬ್ರಹ್ಮಾವರ ತಾಲೂಕಿನ ಕೋಟ ಡಾ. ಶಿವರಾಮ ಕಾರಂತ ಥೀಂ ಪಾರ್ಕ್ ಆವರಣದಲ್ಲಿ ನಿರ್ಮಿಸಲಾದ ವಿನೂತನ ಮಾದರಿಯ ಸಂಗೀತ ಕಾರಂಜಿ ಹಾಗೂ ವೀಕ್ಷಣಾ ಗ್ಯಾಲರಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ನಂತರ ಸುಳ್ಯಕ್ಕೆ ತೆರಳಲಿರುವರು.