ಫಾರ್ಚ್ಯೂನ್ ಆರೋಗ್ಯ ವಿಜ್ಞಾನ ಸಂಸ್ಥೆಯಲ್ಲಿ ಸಾಂಪ್ರದಾಯಿಕ ದಿನ ಆಚರಣೆ

ಬ್ರಹ್ಮಾವರ: ಇಲ್ಲಿನ ಮಧುವನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಫಾರ್ಚ್ಯೂನ್ ಆರೋಗ್ಯ ವಿಜ್ಞಾನ ಸಂಸ್ಥೆಯಲ್ಲಿ ಓಣಂ ಸಂಭ್ರಮ ಆಚರಣೆಯ ಅಂಗವಾಗಿ ಸಂಭ್ರಮ -2022 ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಬುಧವಾರದಂದು ಸಾಂಪ್ರದಾಯಿಕ ದಿನವನ್ನು ಮದರ್ ಪ್ಯಾಲೇಸ್ ಆಡಿಟೋರಿಯಂನಲ್ಲಿ  ಆಚರಿಸಲಾಯಿತು.

ಕಾರ್ಯಕ್ರಮವನ್ನು ಫಾರ್ಚ್ಯೂನ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ತಾರಾನಾಥ್ ಶೆಟ್ಟಿ ಉದ್ಘಾಟಿಸಿದರು.

ಕಾಲೇಜಿನ ಪ್ರಾಂಶುಪಾಲೆ ಸ್ಮಿತಾ ವಿಜೇತರಿಗೆ ಬಹುಮಾನ ವಿತರಿಸಿದರು.

ಕಾಲೇಜಿನ ಅಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.