ಸಂಚಾರಿ ಇ- ಚಲನ್ ಪ್ರಕರಣ: ದಂಡದ ಮೊತ್ತದಲ್ಲಿ ಶೇ.50 ರಿಯಾಯತಿ.

ಉಡುಪಿ: ಪೊಲೀಸ್ ಇಲಾಖೆಯ ಸಂಚಾರಿ ಇ- ಚಲನ್ ನಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ, ಫೆಬ್ರವರಿ 11 ರ ವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ, ಒಂದು ಬಾರಿಯ ಕ್ರಮವಾಗಿ, ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯತಿ ನೀಡಲಿದ್ದು, ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ತಿಳಿಸಿದ್ದಾರೆ.