ಉಡುಪಿ: ಜಿಲ್ಲಾ ಪಂಚಾಯತ್, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳು ಹಾಗೂ ಗೋವರ್ಧನ ಗಿರಿ ಟ್ರಸ್ಟ್ ಪೇಜಾವರ ಮಠ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸಾವಯವ ಸಿರಿ ಯೋಜನೆಯಡಿ ಸಾವಯವ ಕೃಷಿ ವಿಧಾನಗಳ ತರಬೇತಿ ಹಾಗೂ ಪದ್ಧತಿ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ನವೆಂಬರ್ 23 ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮಾವರದ ನೀಲಾವರ ಗೋಶಾಲೆಯಲ್ಲಿ ನಡೆಯಲಿದೆ.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಂದ್ರ ಕುಮಾರ್, ರಾಜ್ಯ ಮಟ್ಟದ ಸಾವಯವ ಕೃಷಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿ ಸದಸ್ಯ ರಾಘವೇಂದ್ರ ರಾವ್ ಉಪ್ಪೂರು, ಕೃಷಿಕ ಸಮಾಜದ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಹಾಗೂ ಮತ್ತಿತರರು ಭಾಗವಹಿಸಲಿರುವರು.