ಉನ್ನತಿ ಕೆರಿಯರ್ ಅಕಾಡೆಮಿ ವತಿಯಿಂದ ಉಡುಪಿ ಕೋಪರೇಟಿವ್ ಟೌನ್ ಬ್ಯಾಂಕ್ ಸಿಬ್ಬಂದಿಗಳಿಗೆ ತರಬೇತಿ ಶಿಬಿರ

ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಹಾಗೂ ಕಾರ್ಪೊರೇಟ್ ತರಬೇತಿಗಳಿಗೆ ಪ್ರಸಿದ್ದಿ ಪಡೆದಿರುವ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ವತಿಯಿಂದ 110 ವರ್ಷಗಳ ಇತಿಹಾಸ ಹೊಂದಿರುವ ಸಹಕಾರಿ ಕ್ಷೇತ್ರದ ಪ್ರಸಿದ್ಧ ಸಂಸ್ಥೆ ಉಡುಪಿ ಕೋಪರೇಟಿವ್ ಟೌನ್ ಬ್ಯಾಂಕ್ ನ ವಿವಿಧ ಶಾಖೆಗಳ ಸಿಬ್ಬಂದಿ ವರ್ಗದವರಿಗೆ ಉಡುಪಿಯ ಮುಖ್ಯ ಕಚೇರಿಯಲ್ಲಿ ಮಂಗಳವಾರ ತರಬೇತಿ ಶಿಬಿರ ಆಯೋಜಿಸಲಾಗಿತ್ತು. ಶಿಬಿರದಲ್ಲಿ ಬ್ಯಾಂಕಿಂಗ್ ಕ್ಷೇತ್ರದ ಹೊಸ ಆಯಾಮಗಳಾದ ಕೆ ವೈ ಸಿ, ಆಂಟಿ ಮನಿ ಲಾಂಡೆರಿಂಗ್, ಕಸ್ಟಮರ್ ರಿಲೇಶನ್ಸ್ ವಿಷಯಗಳ ಬಗ್ಗೆ ನುರಿತ ತಜ್ಞರಿಂದ ಮಾಹಿತಿ ನೀಡಲಾಯಿತು.

ತರಬೇತಿ ಶಿರವನ್ನು ಬ್ಯಾಂಕಿನ ಅಧ್ಯಕ್ಷ ಜಯಪ್ರಕಾಶ್ ಕೆದ್ಲಾಯ ಉದ್ಘಾಟಿಸಿದರು.

ಉನ್ನತಿ ಸಂಸ್ಥೆಯ ಸ್ಥಾಪಕ ಪ್ರೇಮ್ ಪ್ರಸಾದ್ ಶೆಟ್ಟಿ, ತರಬೇತುಗಾರ್ತಿ ಶ್ರೀಮತಿ ಆರತಿ, ಬ್ಯಾಂಕಿನ ಲೆಕ್ಕ ಪರಿಶೋಧಕ ಹೆಬ್ಬಾರ್, ಕೃಷ್ಣ ಮೂರ್ತಿ ಉಪಸ್ಥಿತರಿದ್ದರು. ಬ್ಯಾಂಕಿನ ಉಡುಪಿ ಜಿಲ್ಲೆಯ
ವಿವಿಧ ಶಾಖೆಗಳ ಸಿಬ್ಬಂದಿಗಳು ಈ ಶಿಬಿರದಲ್ಲಿ
ಪಾಲ್ಗೊಂಡರು.