ಯುಜಿಸಿ-ನೆಟ್, ಕೆ-ಸೆಟ್ ಪರೀಕ್ಷೆಗೆ ತರಬೇತಿ

ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರು (ಜೆಆರ್‌ಎಫ್) ಹಾಗೂ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತರು ಜೂನ್ 10 ರ ಒಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5.00 ಗಂಟೆಯೊಳಗೆ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0821- 2515944 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.