ಉಡುಪಿ: ಸ್ವ ಉದ್ಯೋಗ, ಉಚಿತ ತರಬೇತಿ ಮತ್ತು ಉದ್ಯೋಗ ಅವಕಾಶವನ್ನು ಸೃಷ್ಟಿಸುವ ಪ್ರಧಾನ ಮಂತ್ರಿ ಕೌಶಲ್ಯ ಯೋಜನೆಯ 3ನೇ ಆವೃತ್ತಿಯ ತರಬೇತಿ ಕಾರ್ಯಾಗಾರವು ಮಣಿಪಾಲದಲ್ಲಿರುವ ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರೋಮನ್ ಸೆಂಟರ್ ಹೆಡ್ ರಾಘವೇಂದ್ರ ರಾವ್ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ತರಬೇತಿಯಲ್ಲಿ 15 ವರ್ಷದಿಂದ 45 ವರ್ಷದ ವರೆಗಿನ ಯುವಕ, ಯುವತಿಯರು, ಮಹಿಳೆ ಹಾಗೂ ಪುರುಷರು ಭಾಗವಹಿಸಬಹುದು. ಮಾ.15ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಒಂದು ಬ್ಯಾಚ್ನಲ್ಲಿ 30 ರಿಂದ 40 ಮಂದಿ ತರಬೇತಿ ಪಡೆಯಬಹುದಾಗಿದೆ ಎಂದರು.
ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವವರು ಆಧಾರ್ ಕಾರ್ಡ್, 2 ಭಾವಚಿತ್ರ, ಎಸ್ಸೆಸ್ಸೆಲ್ಸಿ, ಪಿಯುಸಿ , ಪದವಿ ಅಂಕಪಟ್ಟಿ, ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿಯನ್ನು ನೀಡಬೇಕು. ಬೆಳಿಗ್ಗೆ 9 ಗಂಟೆಯಿಂದ 1 ಗಂಟೆವರೆಗೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ತರಬೇತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 95350 40711 ಅಥವಾ 94489 37896 ಅನ್ನು ಸಂಪರ್ಕಿಸಬಹುದು.