ಟೆಸ್ಟ್ ಕ್ರಿಕೆಟ್ನಲ್ಲೂ ‘ಟ್ರಾವಿಸ್ ಹೆಡ್’ ಸಿಡಿಲಬ್ಬರ ಶುರುವಾಗಿದೆ. ಅದು ಕೂಡ ಆರಂಭಿಕನಾಗಿ. ಪರ್ತ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೊದಲ ಪಂದ್ಯದ ದ್ಬಿತೀಯ ಇನಿಂಗ್ಸ್ನಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಟ್ರಾವಿಸ್ ಹೆಡ್ ಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ.
ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಇಂಗ್ಲೆಂಡ್ ನೀಡಿದ 205 ರನ್ಗಳ ಗುರಿ ಬೆನ್ನತ್ತಲು ಆಗಮಿಸಿದ ಟ್ರಾವಿಸ್ ಹೆಡ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್ನಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ಗೆ ಒತ್ತು ನೀಡಿದ ಹೆಡ್ 36 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿಯೊಂದಿಗೆ ಸಿಡಿಲಬ್ಬರ ಮುಂದುವರೆಸಿದ ಟ್ರಾವಿಸ್ ಹೆಡ್ ಕೇವಲ 69 ಎಸೆತಗಳಲ್ಲಿ ಶತಕ ಪೂರೈಸಿದರು.
ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ ಸೆಂಚುರಿ ಸಿಡಿಸಿದ ಆರಂಭಿಕ ದಾಂಡಿಗ ಎಂಬ ವಿಶ್ವ ದಾಖಲೆಯನ್ನು ಹೆಡ್ ತಮ್ಮದಾಗಿಸಿಕೊಂಡರು.

















