ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆಯ ಭೂಕಂಪ: ದೆಹಲಿಯಲ್ಲಿ ಕಂಪನದ ಅನುಭವ!

ನವದೆಹಲಿ: ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ಭೂಕಂಪನದ ಅನುಭವವಾಗಿದೆ.

ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, 6.1 ತೀವ್ರತೆಯ ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಸಮೀಪದಲ್ಲಿದೆ. ಮಧ್ಯಾಹ್ನ 2.50ಕ್ಕೆ ಕಂಪನದ ಅನುಭವವಾಗಿದೆ ಎಂದು ಅದು ಹೇಳಿದೆ.

ಪಾಕಿಸ್ತಾನದ ಲಾಹೋರ್ ಮತ್ತು ಪೂಂಚ್ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ.

ಭೂಕಂಪದಿಂದ ಯಾವುದೇ ಪ್ರಾಣಹಾನಿ, ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ.