ಉಡುಪಿ – 2026–27ನೇ ಸಾಲಿನಲ್ಲಿ ನಡೆದ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಲಾಸ್ಯಾ ಯಾದವ್ ಕುಂದರ್ ಅವರು ವಿದ್ಯಾರ್ಥಿನಿಯರ ಕರಾಟೆ – 40 ಕೆ.ಜಿ. ವಿಭಾಗದಲ್ಲಿ ಭಾಗವಹಿಸಿ ಉತ್ತಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಈ ಸ್ಪರ್ಧೆಯು 11-08-2026ರಂದು ಮಿಲಾಗ್ರಿಸ್ ಪದವಿಪೂರ್ವ ಕಾಲೇಜು, ಕಲ್ಯಾಣಪುರದಲ್ಲಿ ನಡೆದಿದ್ದು, ವಿವಿಧ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಲಾಸ್ಯಾ ಯಾದವ್ ಕುಂದರ್ ಅವರು ಸ್ಪರ್ಧೆಯಲ್ಲಿ ಆತ್ಮವಿಶ್ವಾಸ, ಶಿಸ್ತು, ಧೈರ್ಯ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಅವರ ಈ ಸಾಧನೆಯು ಕಾಲೇಜಿಗೆ ಹೆಮ್ಮೆ ತಂದಿದ್ದು, ಇತರ ವಿದ್ಯಾರ್ಥಿಗಳಿಗೂ ಕ್ರೀಡೆಯಲ್ಲಿ ಭಾಗವಹಿಸಲು ಪ್ರೇರಣೆಯಾಗಿದೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಹಪಾಠಿಗಳು ಅಭಿನಂದನೆ ಸಲ್ಲಿಸಿದ್ದಾರೆ















