ಕಟಪಾಡಿ: ತ್ರಿಶಾ ಕ್ಲಾಸಸ್ ನ ಸಿ.ಎ ಹಾಗೂ ಸಿ.ಎಸ್ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕಟಪಾಡಿ: ಸಿ.ಎ, ಸಿ.ಎಸ್ ಮೊದಲಾದ ವೃತ್ತಿಪರ ಕೋರ್ಸ್ ಗಳ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿ.ಎ ಫೈನಲ್ , ಇಂಟರ್ ಮೀಡಿಯೆಟ್ ಮತ್ತು ಸಿ.ಎಸ್ ಎಕ್ಸಿಕ್ಯೂಟಿವ್ ಪರೀಕ್ಷೆಗಳಲ್ಲಿ ಉತ್ತೀರ್ಣರಾದ 80ಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತ್ರಿಶಾ ಸಂಸ್ಥೆಯ ಅಧ್ಯಕ್ಷ ಸಿಎ ಗೋಪಾಲ ಕೃಷ್ಣಭಟ್ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ವಿದ್ಯಾರ್ಥಿಗಳ ಸಾಧನೆಗೆ ಬಹಳ ಹೆಮ್ಮೆ ಎನಿಸುತ್ತಿದೆ. ಇದರಲ್ಲಿ ಪೋಷಕರ ಪಾತ್ರವೂ ಬಹಳ ದೊಡ್ದದು. ಸಿ. ಎ ಮತ್ತು ಸಿ.ಎಸ್ ವಿದ್ಯಾರ್ಥಿಗಳಲ್ಲಿ ಸಾಧನೆ ಮಾಡಿಯೇ ತೀರುತ್ತೇನೆ ಎಂಬ ಕಿಚ್ಚು ಇರಬೇಕು ಆಗ ಮಾತ್ರ ಯಶಸ್ಸು ಸಾಧ್ಯ ಎಂದರು.

ಬಳಿಕ ಐ.ಸಿ.ಎ.ಐ ನ ಹೊಸ ಸ್ಕೀಮ್ ಪ್ರಕಾರ ಆರ್ಟಿಕಲ್ ಷಿಪ್ ಬಗೆಗಿನ ಹೊಸ ವಿಧಾನಗಳನ್ನು ವಿವರಿಸಿದರು.

ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ (ಆಲ್ ಇಂಡಿಯಾ) 10 ನೇ ರ‍್ಯಾಂಕ್ ಗಳಿಸಿದ ದೀಪಕ್ ಹೆಗ್ಡೆ (653) ಹಾಗೂ 50ನೇ ರ‍್ಯಾಂಕ್ ಗಳಿಸಿದ ಪ್ರಜ್ವಲ್ ಎ ಮೌಲ್ಯ (591) ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳನ್ನು ಹೆತ್ತವರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ನಂತರ ವಿದ್ಯಾರ್ಥಿಗಳು ಅವರ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಸಿದ್ಧಾಂತ್ ಫೌಂಡೇಶನ್ ನ ಟ್ರಸ್ಟಿ ನಮಿತಾ ಜಿ. ಭಟ್, ತ್ರಿಶಾ ಕ್ಲಾಸಸ್ ಉಡುಪಿ ಕೇಂದ್ರದ ಮುಖ್ಯಸ್ಥ ವಿಘ್ನೇಶ್ ಶೆಣೈ ಬಿ. ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಕ್ಷಿತಿ ಶೆಣೈ ನಿರೂಪಿಸಿ, ಕೇಂದ್ರ ಮುಖ್ಯಸ್ಥ ವಿಘ್ನೇಶ್ ಶೆಣೈ ವಂದಿಸಿದರು.