ಉಡುಪಿ: ಕರಾವಳಿಯಲ್ಲಿ 24 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತ್ರಿಶಾ ಕ್ಲಾಸಸ್ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪರೀಕ್ಷೆಯನ್ನು ಜನವರಿ 22 ರಂದು ನಡೆಸಲಾಗುತ್ತಿದೆ.
ಪಿಯು ವಿದ್ಯಾರ್ಥಿಗಳಲ್ಲಿ ವಾಣಿಜ್ಯ ವಿಷಯದ ಜೊತೆಗೆ ಸಾಮಾನ್ಯ ಜ್ಞಾನ, ಪಠ್ಯದ ಜ್ಞಾನ ಹಾಗೂ ಪಠ್ಯೇತರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ತ್ರಿಶಾ ಸ್ಕಾಲರ್ ಶಿಪ್ ಪರೀಕ್ಷೆ (Tisha Scolarship Test) ಅನ್ನು ಸಿದ್ಧಪಡಿಸಲಾಗಿದೆ. ಈ ಪರೀಕ್ಷೆಯಲ್ಲಿ ಯಾವುದೇ ಕ್ಷೇತ್ರದ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು, ಗಳಿಸಿದ ಅಂಕದ ಆಧಾರದ ಮೇಲೆ ಮುಂದಿನ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ ಒದಗಿಸಲಾಗುತ್ತಿದೆ.
ಸ್ಪರ್ಧಾತ್ಮಕ ಪರೀಕ್ಷೆಯ ಅನುಭವ ಪಡೆಯಲು ಸಹಕಾರಿಯಾಗಲಿರುವ ಈ ಪರೀಕ್ಷೆಯಲ್ಲಿ,ರಾಜ್ಯದ ಯಾವುದೇ ಭಾಗದ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಜ. 22 ರ ಬೆಳಿಗ್ಗೆ 10:30ರಿಂದ 12:30ರ ವರೆಗೆ ಆನ್ಲೈನ್ ಮೂಲಕ ನಡೆಯಲಿರುವ ಈ ಪರೀಕ್ಷೆಗೆ ಯಾವುದೇ ನೋಂದಣಿ ಶುಲ್ಕವಿರುವುದಿಲ್ಲ.
https://tinyurl.com/TSTTrisha ಮೂಲಕ ಅಥವಾ ಸಂಸ್ಥೆಯನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.












