ಉಡುಪಿ: ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಜೂನ್ 2022ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಉಪ್ಪೂರಿನ ರಚಿತ್ ಆರ್ ಶೆಟ್ಟಿ ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ. ಉಡುಪಿಯ ಲೆಕ್ಕಪರಿಶೋಧಕರಾದ ದೇವ್ ಆನಂದ್ ಮತ್ತು ಕಂಪೆನಿಯಲ್ಲಿ ಆರ್ಟಿಕಲ್ಶಿಪ್ ಪೂರೈಸಿದ್ದು, ಇವರು ‘ಸಿಎ’ಯ ಎರಡು ಹಂತದ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಅಂತಿಮ ಹಂತದ ತರಬೇತಿಯನ್ನು ಆನ್ ಲೈನ್ ಮೂಲಕ ಪಡೆದಿರುತ್ತಾರೆ. ಉಡುಪಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಬಿ.ಕಾಂ ಪದವಿಯನ್ನು ಪೂರೈಸಿರುತ್ತಾರೆ. ಇವರು ಉಪ್ಪೂರಿನ ರತ್ನಾಕರ ಶೆಟ್ಟಿ ಮತ್ತು ಗೀತಾ ಶೆಟ್ಟಿ ದಂಪತಿಯ ಪುತ್ರರಾಗಿದ್ದಾರೆ.