ತ್ರಿಶಾ ವಿದ್ಯಾ ಕಾಲೇಜಿನ ಪ್ರತಿಭಾ ವಂದನೆ ಹಾಗೂ ಬಹುಮಾನ ವಿತರಣಾ ಸಮಾರಂಭ

ಕಟಪಾಡಿ: ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ ಹವ್ಯಾಸಗಳಲ್ಲೂ ತೊಡಗಿಸಿಕೊಳ್ಳಬೇಕು.
ಇದರಿಂದ ಪ್ರತಿಭೆ, ಆತ್ಮವಿಶ್ವಾಸ ಮತ್ತು ನಾಯಕತ್ವ ಗುಣ ಬೆಳೆಯುತ್ತದೆ ಎಂದು ಪಡುಬಿದ್ರೆಯ ಸಾಗರ್ ವಿದ್ಯಾ ಮಂದಿರದ
ಮುಖ್ಯೋಪಾಧ್ಯಾಯಿನಿ ಪದ್ಮಶ್ರೀ ಸುರೇಶ್ ರಾವ್ ಹೇಳಿದರು.
ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜು ನ.26ರಂದು ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರತಿಭಾ ವಂದನೆ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ವಿಶೇಷ ಪ್ರತಿಭೆ ಅಡಗಿರುತ್ತದೆ; ಅದನ್ನು ಗುರುತಿಸಿ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕರು ಸಿಎ ಗೋಪಾಲಕೃಷ್ಣ ಭಟ್, ವಿದ್ಯಾರ್ಥಿಗಳ ಸರ್ವತೋಮುಖ
ಬೆಳವಣಿಗೆಯಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಹಾಗೂ ಶಿಕ್ಷಕ-ವಿದ್ಯಾರ್ಥಿ ಬಾಂಧವ್ಯದ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶ್ರೀ ವಿದ್ಯಾ ವಿನಾಯಕ ಮಹೋತ್ಸವದ ಸಂದರ್ಭದಲ್ಲಿ ಸಂಗ್ರಹಿಸಿದ ಹಣದಿಂದ ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಗೆ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.
ಪ್ರಾಂಶುಪಾಲರು ಹರಿಪ್ರಸಾದ್, ಅಕಾಡೆಮಿಕ್ ಮ್ಯಾನೇಜರ್ ಡಾ. ಶಾಂತಪ್ರಿಯ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.