ತ್ರಿಶಾ ವಿದ್ಯಾ ಪಿಯು ಕಾಲೇಜು: ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ಕಟಪಾಡಿ, ಜುಲೈ 31: ತ್ರಿಶಾ ವಿದ್ಯಾ ಪಿ. ಯು ಕಾಲೇಜಿನಲ್ಲಿ KCET, NEET ಮತ್ತು JEE ಪ್ರವೇಶ ಪರೀಕ್ಷೆಗಳ ಕುರಿತು
ಪ್ರಥಮ ಮತ್ತು ದ್ದಿತೀಯ ಪಿ. ಯು ವಿದ್ಯಾರ್ಥಿಗಳಿಗೆ ಒರಿಯಂಟೇಶನ್‌ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.
ಜ್ಯೋತಿ ಬೆಳಗಿಸುವ ಮೂಲಕ ಈ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷೆತೆಯನ್ನು ವಹಿಸಿದ್ದ
ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ. ಎ. ಗೋಪಾಲ ಕೃಷ್ಣ ಭಟ್‌ ಇವರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಬಗ್ಗೆ
ಅಮೂಲ್ಯ ವಿಚಾರಗಳನ್ನು ಹಂಚಿಕೊಂಡರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿರುವ ರಾಷ್ಟ್ರೋತ್ಥಾನ ಪಿ. ಯು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಭ್ಯಾಗ್ಯಶ್ರಿ ಐತಾಳ್‌ ಇವರು ವಿದ್ಯಾರ್ಥಿಗಳ ಭವಿಷ್ಯದ ಕುರಿತು ಸ್ಪಷ್ಟ ಮಾರ್ಗದರ್ಶನ ನೀಡಿ, ಪರೀಕ್ಷಾ ಸಿದ್ದತೆಯ ಕುರಿತು ಸಂಪೂರ್ಣವಾದ ಮಾಹಿತಿಯನ್ನು ನೀಡಿದರು. ನಂತರ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರಿಪ್ರಸಾದ್ ಇವರು ವಿದ್ಯಾರ್ಥಿಗಳಿಗೆ ಅಗತ್ಯವಾದ ಮಾಹಿತಿಗಳನ್ನು ನೀಡಿದರು.
ಕಾರ್ಯಕ್ರಮದ ನಿರೂಪಣೆಯನ್ನು ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಸಂದ್ಯಾ ಇವರು ನಡೆಸಿಕೊಟ್ಟರು, ಭೌತಶಾಸ್ತ್ರ
ವಿಭಾಗದ ಉಪನ್ಯಾಸಕರಾದ ನವೀನ್‌ ಇವರು ಸ್ವಾಗತಿಸಿದರು, ಕನ್ನಡ ವಿಭಾಗದ ಉಪನ್ಯಾಸಕಿ ಸರಿತ ಇವರು ವಂದಿಸಿದರು.